ADVERTISEMENT

ರಾಮನಗರ | ಯೋಗ ದಿನಾಚರಣೆ: ಗಮನ ಸೆಳೆದ ಸಾಮೂಹಿಕ ಯೋಗಾಭ್ಯಾಸ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 3:48 IST
Last Updated 21 ಜೂನ್ 2024, 3:48 IST
   

ರಾಮನಗರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನೂರಾರು ಮಂದಿ ಸಾಮೂಹಿಕವಾಗಿ ಯೋಗಾಭ್ಯಾಸ ಮಾಡಿದರು.

ಯೋಗ ಗುರು ಪತಂಜಲಿ ಯೋಗ ಟ್ರಸ್ಟ್ ನ ಸತೀಶ್ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು- ಸಿಬ್ಬಂದಿ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಸೇರಿದಂತೆ ಹಿರಿಯ ಅಧಿಕಾರಿಗಳು ಯೋಗಾಭ್ಯಾಸ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.