ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣದ ಸರ್ಕಾರಿ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಇದಕ್ಕೂ ಮೊದಲು ಕಾರ್ಯಕ್ರಮದ ಉದ್ದೇಶ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಕ್ರಿಯೆ ಕುರಿತು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಎಸ್. ರವಿ, ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕ ಅಶ್ವಥ್, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಮಳೂರು, ಮತ್ತೀಕೆರೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಜನಪ್ರತಿನಿಧಿಗಳು, ಗಣ್ಯರು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿ ಇದ್ದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಅವರು ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.