ADVERTISEMENT

ಜೆಜೆಎಂ ಕಳಪೆ ಕಾಮಗಾರಿ: ಕೇಂದ್ರ ಸಚಿವರಿಗೆ ದೂರು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 5:09 IST
Last Updated 15 ಮಾರ್ಚ್ 2024, 5:09 IST
ಕುದೂರು ಹೋಬಳಿ ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿ
ಕುದೂರು ಹೋಬಳಿ ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿ   

ಕುದೂರು: ಹೋಬಳಿಯ ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿ ತೀರಾ ಕಳಪೆಯಿಂದ ಕೂಡಿದ್ದು, ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬಿಸ್ಕೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್ ಸುಹೇಲ್ ಮತ್ತಿತರರು ಪತ್ರ ಬರೆದು ಕ್ರಮಕ್ಕೆ ಅಗ್ರಹಿಸಿದ್ದಾರೆ.

ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಸ್ಕೂರು, ಮುತ್ತಸಾಗರ, ಕೋಡಿಹಳ್ಳಿಯಲ್ಲಿ ನಡೆಯುತ್ತಿರುವ ಜೆಜೆಎಂ ಕಾಮಗಾರಿ ತೀರ ಕಳಪೆಯಿಂದ ಕೂಡಿದೆ. ಕಳಪೆ ಕಾಮಗಾರಿ ನಡೆಸಲು ಇಂಜಿನಿಯರ್ ಮತ್ತು ಗುತ್ತಿಗೆದಾರರೊಂದಿಗೆ ಗ್ರಾಮ ಪಂಚಾಯಿತಿ ಪಿಡಿಒ ಶಾಮೀಲಾಗಿದ್ದಾರೆ ಎಂದು ಬಿ.ಎಸ್ ಸುಹೇಲ್, ಅರುಣ್ ಕುಮಾರ್, ವಿಜಯ್ ಕುಮಾರ್, ಬೈರೋಜಿ ರಾವ್, ಅಲ್ಲಾ ಬಕಶ್ ಆರೋಪಿಸಿದ್ದಾರೆ.

ಈ ಸಂಬಂಧ ಈಗಾಗಲೇ ರಾಮನಗರ ಜಿಲ್ಲಾಧಿಕಾರಿ ಡಾಕ್ಟರ್ ಅವಿನಾಶ್ ಮೆನನ್ ರಾಜೇಂದ್ರನ್, ಸಿಇಒ ದಿಗ್ವಿಜಯ್ ಬೋಡ್ಕೆ ರವರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಲಿಖಿತ ಪತ್ರ ಬರೆದು ಕಳಪೆ ಕಾಮಗಾರಿ ನಡೆಸಿರುವವರ ವಿರುದ್ಧ ಹಾಗೂ ಸಹಕರಿಸಿರುವವರ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯಿಸಿದ್ದಾರೆ.

ADVERTISEMENT

ಈ ಸಂಬಂಧ ಮಾಗಡಿ ಉಪ ವಿಭಾಗದ ಜೆಜೆಎಂ ಎಂಜಿನಿಯರ್ ವಿಜಯ್ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಅವರು ಕರೆ ಸ್ವೀಕರಿಸಲಿಲ್ಲ.

ಕುದೂರು ಹೋಬಳಿ ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿ
ಕೇಂದ್ರ ಸಚಿವರಿಗೆ ಬರೆದ ದೂರಿನ ಪ್ರತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.