ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಕಚುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವೀರಭದ್ರೇಗೌಡ, ಉಪಾಧ್ಯಕ್ಷರಾಗಿ ಪಿ.ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಡೇರಿಯ ಅಧ್ಯಕ್ಷ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಮತ್ತು ಶಿವರುದ್ರ (ರಾಜು) ಅವರು ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಸಂಘದ ಕಚೇರಿ ಆವರಣದಲ್ಲಿ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೀರಭದ್ರೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಶಿವಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಆಶಾ ಚುನಾವಣಾಧಿಕಾರಿಯಾಗಿ, ಡೇರಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಡೇರಿ ಮಾಜಿ ಅಧ್ಯಕ್ಷ ವಿಜೇಂದ್ರ, ಮಾಜಿ ಉಪಾಧ್ಯಕ್ಷ ಶಿವರುದ್ರ ನಿರ್ದೇಶಕರಾದ ಸ್ವಾಮಿ, ಮುದ್ದಮ್ಮ, ಕೆಂಪಮ್ಮ, ಶ್ರೀನಿವಾಸ್ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಕಬ್ಬಾಳು ಸೊಸೈಟಿ ಸಿಇಒ ಲಿಂಗೇಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ರಾಜು, ಅನಿಲ್ ಕುಮಾರ್, ಸೋಮರಾಜು, ಚಾಮೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.