ADVERTISEMENT

ಕನಕಪುರ: ಕೈವಾರ ತಾತಯ್ಯ ಜಯಂತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 5:22 IST
Last Updated 26 ಮಾರ್ಚ್ 2024, 5:22 IST
ಕನಕಪುರ ನಗರದ ಪ್ರಮುಖ ಬೀದಿಗಳಲ್ಲಿ ಸೋಮವಾರ ಕೈವಾರ ತಾತಯ್ಯ ಅವರ ಮೆರವಣಿಗೆ ನಡೆಯಿತು.
ಕನಕಪುರ ನಗರದ ಪ್ರಮುಖ ಬೀದಿಗಳಲ್ಲಿ ಸೋಮವಾರ ಕೈವಾರ ತಾತಯ್ಯ ಅವರ ಮೆರವಣಿಗೆ ನಡೆಯಿತು.   

ಕನಕಪುರ: ಇಲ್ಲಿನ ತಾಲ್ಲೂಕ ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ಸೋಮವಾರ ಕೈವಾರ ತಾತಯ್ಯ ಯೋಗ ನಾರೇಯಣ ಯತೀಂದ್ರ ಅವರ ಜಯಂತಿಯ್ನನು ವಿಜೃಂಭಣೆಯಿಂದ ಆಚರಿಸಲಾಯಿತು.

ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತ. ಬಳಿಕ ತಾಲ್ಲೂಕು ಬಲಿಜ ಸಮುದಾಯದ ವತಿಯಿಂದ ಕೈವಾರ ತಾತಯ್ಯ ಅವರ ಭಾವಚಿತ್ರವನ್ನು ಪಲ್ಲಕ್ಕಿ ಮತ್ತು ಎತ್ತಿನ ಬಂಡಿಯ ಮೇಲೆ ಇಟ್ಟು ಅಯ್ಯಪ್ಪಸ್ವಾಮಿ ದೇವಾಲಯದಿಂದ ಚನ್ನಬಸಪ್ಪ ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು.

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಪಾಲ್ಗೊಂಡು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಬಲಿಜ ಸಮುದಾಯದ ಮಹಿಳೆಯರು ಹಾಗೂ ಪುರುಷರು ಮೆರವಣಿಗೆಯಲ್ಲಿ ಪಾಲ್ಗೊಂಡು ಕೈವಾರ ತಾತಯ್ಯ ಯೋಗಿ ನಾರಾಯಣ ಯತೀಂದ್ರ ಘೋಷಣೆಗಳನ್ನು ಕೂಗಿ ಜೈಕಾರ ಹಾಕಿ ಹೆಜ್ಜೆಹಾಕಿದರು.

ADVERTISEMENT

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಲಿಜ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಲಾ ತಂಡಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.