ADVERTISEMENT

ಸ್ವಾರ್ಥ ರಾಜಕಾರಣಿಗಳನ್ನು ದೂರವಿಡಿ

ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮನವಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 6:57 IST
Last Updated 24 ಫೆಬ್ರುವರಿ 2024, 6:57 IST
<div class="paragraphs"><p>ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ&nbsp;ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಭೆಯಲ್ಲಿ, </p></div>

ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಭೆಯಲ್ಲಿ,

   

ರಾಮನಗರ: ‘ಭ್ರಷ್ಟಚಾರ, ಸ್ವಜನ ಪಕ್ಷಪಾತ, ಅನೈತಿಕ ನಡವಳಿಕೆ, ಸಮಾಜಘಾತುಕತನ ಹಾಗೂ ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮಣ್ಣು ಮಾಡುತ್ತಿವೆ. ಸ್ವಾರ್ಥ ರಾಜಕಾರಣ ಮಾಡುವ ರಾಜಕಾರಣಿಗಳನ್ನು ಜನರು ದೂರವಿಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರಕ್ಕೆ ಇತ್ತೀಚೆಗೆ ಬಂದ ಪಕ್ಷದ ಬೈಕ್ ಜಾಥಾಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾಗತ ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಜನಪರ ಕಾಳಜಿಯೊಂದಿಗೆ ಪಾರದರ್ಶಕ ಹಾಗೂ ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ಕೆಆರ್‌ಎಸ್ ನಿರಂತರವಾಗಿ ಶ್ರಮಿಸುತ್ತಿದೆ. ಜನರು ನಮ್ಮ ಪಕ್ಷದ ಚಟುವಟಿಕೆಗಳನ್ನು ಗಮನಿಸಿ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಪಕ್ಷವು ಈ ನಾಡಿನ ಜನರ ನಾಡಿಮಿಡಿತ ಅರಿತಿದೆ. ಭ್ರಷ್ಟ ವ್ಯವಸ್ಥೆಯನ್ನು ತೊಲಗಿಸಿ, ಪಾರದರ್ಶಕ ವ್ಯವಸ್ಥೆಯ ನಿರ್ಮಾಣಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಇದಕ್ಕಾಗಿ ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ 13 ದಿನಗಳ 3 ಸಾವಿರ ಕಿ.ಮೀ. ಬೈಕ್ ಜಾಥಾ ನಡೆಸಲಾಗುತ್ತಿದೆ. ಫೆ. 19ರಂದು ದೇವನಹಳ್ಳಿಯಲ್ಲಿ ಜಾಥಾ ಶುರುವಾಯಿತು’ ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್ ಮಾತನಾಡಿ, ‘ಜಾಥಾ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಆನೇಕಲ್, ಹಾರೋಹಳ್ಳಿ ಮೂಲಕ ರಾಮನಗರ ತಲುಪಿದೆ. ಇಡೀ ರಾಜ್ಯದಾದ್ಯಂತ ಜಾಥಾ ನಡೆಯುತ್ತದೆ. ಪಕ್ಷದ ಸಿದ್ಧಾಂತಗಳನ್ನು ಹಾಗೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಜನವಿರೋಧಿ ನಿಲುವು ಹಾಗೂ ನೀತಿಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಸುಧಾಕರ್, ‘ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು  ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡಿಕೊಂಡು ಬಂದಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್, ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜುನಾಥ್, ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಚಂದ್ರಶೇಖರ್ ಮಠದ, ಬಿ.ಜಿ. ಕುಂಬಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.