ADVERTISEMENT

ಕುದೂರು: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 14:13 IST
Last Updated 29 ಮಾರ್ಚ್ 2024, 14:13 IST
ಕುದೂರು ಹೋಬಳಿ ಮರೂರು ಗ್ರಾಮದ ಪಾಪಣ್ಣ ಎಂಬುವರ ತೋಟದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಸೆರೆಯಾಗಿದೆ.
ಕುದೂರು ಹೋಬಳಿ ಮರೂರು ಗ್ರಾಮದ ಪಾಪಣ್ಣ ಎಂಬುವರ ತೋಟದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಸೆರೆಯಾಗಿದೆ.   

ಕುದೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಸೆರೆಯಾಗಿದೆ.

ಹೋಬಳಿಯ ಮರೂರು ಗ್ರಾಮದ ಪಾಪಣ್ಣ ಎಂಬುವರ ತೋಟದಲ್ಲಿ ಇಟ್ಟಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಒಂದು ತಿಂಗಳಿಂದ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಹಸು, ಕರು, ಮೇಕೆಗಳ ಮೇಲೆ ನಿರಂತರ ದಾಳಿ ನಡೆಸಿ, ರೈತರ ನಿದ್ದೆಗೆಡಿಸಿತ್ತು. ಈ ಬಗ್ಗೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅರಣ್ಯ ಇಲಾಖೆ ಎರಡು ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ಶುಕ್ರವಾರ ಮುಂಜಾನೆ ಚಿರತೆ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಮಾಗಡಿ ವಲಯ ಅರಣ್ಯಾಧಿಕಾರಿ ಚೈತ್ರಾ, ಅಂಜನ ಮೂರ್ತಿ, ಅನಿಲ್, ರಕ್ಷಿತ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.