ADVERTISEMENT

ಮಾಗಡಿ: ಲಿಂಗಾಯತ ಮಹಾಸಭಾ ಚುನಾವಣೆ ಶಾಂತಿಯುತ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 5:53 IST
Last Updated 22 ಜುಲೈ 2024, 5:53 IST
ಮಾಗಡಿ ಬಂಡೇಶ್ವರ ಸರ್ವೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ಮತದಾನ ಮಾಡಲು ಸರದಿ ಸಾಲಿನಲ್ಲಿ ನಿಂತಿರುವ ಮತದಾರರು
ಮಾಗಡಿ ಬಂಡೇಶ್ವರ ಸರ್ವೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ಮತದಾನ ಮಾಡಲು ಸರದಿ ಸಾಲಿನಲ್ಲಿ ನಿಂತಿರುವ ಮತದಾರರು    

ಮಾಗಡಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಮತದಾನ ಮಾಗಡಿ ತಾಲ್ಲೂಕಿನಲ್ಲಿ ಶಾಂತಿಯುತವಾಗಿ ನಡೆಯಿತು. ಶೇ80.6ರಷ್ಟು ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಚಂದ್ರಶೇಖರ್ ತಿಳಿಸಿದರು.

ಪಟ್ಟಣದ ಎಂಇಎಸ್ ಬಡಾವಣೆ ಬಂಡೇಶ್ವರ (ಸರ್ವೋದಯ) ಶಿಕ್ಷಣ ಸಂಸ್ಥೆ ಶಾಲಾ ಆವರಣದಲ್ಲಿ ಭಾನುವಾರ ಬೆಳಗ್ಗೆ 8ಕ್ಕೆ ಮತದಾನ ಆರಂಭವಾಗಿ ಸಂಜೆ 5:00ಕ್ಕೆ ಮುಕ್ತಾಯಗೊಂಡಿತು. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಶಾಂತಿಯುತವಾಗಿ ಮತದಾನ ನಡೆಯಿತು. ತಾಲ್ಲೂಕಿನಲ್ಲಿ ಒಟ್ಟು 454 ಮತದಾರರ ಪೈಕಿ 366 ಮತಗಳು ಚಲಾವಣೆಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT