ADVERTISEMENT

ಹೇಮಾವತಿ ನೀರು: ಮಠಾಧೀಶರ ನೇತೃತ್ವದಲ್ಲಿ ಹೋರಾಟ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 6:47 IST
Last Updated 13 ಜೂನ್ 2024, 6:47 IST
ಮಾಗಡಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮಾತನಾಡಿದರು.
ಮಾಗಡಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮಾತನಾಡಿದರು.   

ಮಾಗಡಿ: ಹೇಮಾವತಿ ನೀರಿಗಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.

ಸುದ್ದಿರಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಮಠಾಧೀಶರು ಹೇಮಾವತಿ ನೀರಾವರಿ ಹೋರಾಟದ ಮುಂದಾಳತ್ವ ವಹಿಸಿಕೊಳ್ಳಬೇಕು. ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷದ ಮುಖಂಡರು, ಸಂಘಟನೆ, ಸಂಘ, ಸಂಸ್ಥೆಗಳೊಂದಿಗೆ ಸೇರಿ ಹೋರಾಟ ರೂಪಿಸಲಾಗುವುದು ಎಂದರು.

ಹೇಮಾವತಿ ನೀರಿಗಾಗಿ ತುಮಕೂರು ಜಿಲ್ಲೆಯ ರೈತರು ಒಗ್ಗಟ್ಟಾಗಿದ್ದಾರೆ. ಮಾಗಡಿ ತಾಲ್ಲೂಕಿನ ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೇಮಾವತಿ ನೀರು ಬಂದರೆ ತಾಲ್ಲೂಕಿನ ಕೆರೆ ತುಂಬುತ್ತವೆ ಎಂದರು.

ADVERTISEMENT

ರೈತ ಸಂಘದ ತಾಲೂಕು ಯುವ ಘಟಕದ ಅಧ್ಯಕ್ಷ ರವಿಕುಮಾರ್, ಶಿವಲಿಂಗಯ್ಯ, ಹಳ್ಳಿಕಾರ್ ಹನುಮಂತರಾಜು, ವೆಂಕಟೇಶ್, ಕರಿಯಪ್ಪ, ನಿಂಗಣ್ಣ, ಹನುಮಂತಯ್ಯ, ಚಿಕ್ಕಣ್ಣ ರಾಮಣ್ಣ, ಬುಡನ್‌ಸಾಬ್, ನಾರಾಯಣಪ್ಪ, ಕೃಷ್ಣಪ್ಪ, ಸಿದ್ದಪ್ಪ, ಚಂದ್ರಪ್ಪ, ನಾಗರಾಜು  ಭಾಗವಹಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.