ADVERTISEMENT

ಮಾಗಡಿ: ಸ್ಟೇರಿಂಗ್ ರಾಡ್ ಕಟ್ಟಾಗಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 6:42 IST
Last Updated 18 ಅಕ್ಟೋಬರ್ 2024, 6:42 IST
<div class="paragraphs"><p>ಮಣ್ಣಿನ ದಿಬ್ಬಕ್ಕೆ ಬಸ್&nbsp;ಡಿಕ್ಕಿ ಹೊಡೆದಿರುವುದು</p></div>

ಮಣ್ಣಿನ ದಿಬ್ಬಕ್ಕೆ ಬಸ್ ಡಿಕ್ಕಿ ಹೊಡೆದಿರುವುದು

   

ಮಾಗಡಿ: ರಾಮನಗರದಿಂದ ಮಾಗಡಿಗೆ ಬರುತ್ತಿದ್ದ ಸರ್ಕಾರಿ ಬಸ್ ನ ಸ್ಟೇರಿಂಗ್ ರಾಡ್ ಕಟ್ಟಾಗಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುದೈವವಶಾತ್ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ತಾಲೂಕಿನ ಅತ್ತಿಂಗೆರೆ ಗೇಟ್ ಸಮೀಪದ ಮುಖ್ಯರಸ್ತೆ ಬಳಿ ಘಟನೆ ನಡೆದಿದ್ದು ರಾಮನಗರದಿಂದ ಮಾಗಡಿಗೆ ಬರುವ ವೇಳೆ ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ.

ADVERTISEMENT

ಬಸ್ ನಲ್ಲಿದ್ದ 19ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌

ಒಬ್ಬ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿ ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.