ADVERTISEMENT

ರಾಮನಗರ: ವಿದೇಶಿ ವ್ಯಾಸಂಗ ವೇತನ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 14:29 IST
Last Updated 14 ನವೆಂಬರ್ 2024, 14:29 IST

ರಾಮನಗರ: 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌. ಡಿ ಸಂಶೋಧನೆ ಕೈಗೊಳ್ಳುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.5 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://bcwd.karnataka.gov.in/ ಅನ್ನು ಅಥವಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಟರ್ನ್‌ಶಿಪ್‌ ಅರ್ಜಿ ಆಹ್ವಾನ

ADVERTISEMENT

ರಾಮನಗರ: ಪ್ರಧಾನಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯಡಿ 21 ರಿಂದ 24 ವಯಸ್ಸಿನ ಯುವಕ, ಯುವತಿಯರಿಗೆ 12 ತಿಂಗಳ ಇಂಟರ್ನ್‌ಶಿಪ್‌ ಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

https://pminternship.mca.gov.in/login ಮೂಲಕ ಅರ್ಜಿ ಸಲ್ಲಿಸಬೇಕು. ಒಂದು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು ₹5,000 ಅನ್ನು ಆಯ್ಕೆಯಾದ ಕಂಪನಿ ನೀಡಲಿದೆ. ಪ್ರೌಢಶಾಲೆ ಅಥವಾ ಹಿರಿಯ ಪ್ರಾಥಮಿಕ ಶಾಲೆ, ಐಟಿಐ, ಪಾಲಿಟೆಕ್ನಿಕ್‌ನಿಂದ ಡಿಪ್ಲೊಮಾ, ಪದವಿಯಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಸಿ.ಎ ಶಿಕ್ಷಣ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ನ.15ಕೊನೆಯ ದಿನ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.