ADVERTISEMENT

ಮಾಗಡಿ | ಮಂಚನಬೆಲೆ ಸೇತುವೆ ಮೇಲೆ ಹರಿಯುತ್ತಿದೆ ನೀರು, ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 8:30 IST
Last Updated 21 ಅಕ್ಟೋಬರ್ 2024, 8:30 IST
   

ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರು ಬಂದ ಹಿನ್ನೆಲೆಯಲ್ಲಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದ್ದು ತಾತ್ಕಾಲಿಕ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ.

ಕಳೆದ ಎರಡುವರೆ ವರ್ಷಗಳ ಹಿಂದೆ ಮುಖ್ಯ ಸೇತುವೆ ಹೆಚ್ಚುವರಿ ಮಳೆಯಿಂದ ಕೊಚ್ಚಿ ಹೋಗಿತ್ತು ಈಗ ತಾತ್ಕಾಲಿಕ ಸೇತುವೆ ಕೂಡ ಮುಳುಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು ಕಾವೇರಿ ನೀರಾವರಿ ನಿಗಮದಿಂದ 25 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು ಈಗ ಹೊಸದಾಗಿ ಸೇತುವೆ ನಿರ್ಮಾಣ ಮಾಡಲು 13 ಕೋಟಿ ವೆಚ್ಚದ ಟೆಂಡರ್ ಕರೆದಿದ್ದು ಎರಡುವರೆ ವರ್ಷಗಳಿಂದಲೂ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

ಮಂಚನಬೆಲೆ, ಬಿಡದಿ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೈವೇ, ರಾಮೋಹಳ್ಳಿ ,ಚಂದ್ರಪ್ಪ ಸರ್ಕಲ್, ದೊಡ್ಡ ಆಲದಮರ, ಕೆಂಗೇರಿಗೆ ಸಂಪರ್ಕಿಸುವ ರಸ್ತೆ ಈಗ ಮುಳುಗಡೆ ಆಗಿರುವುದರಿಂದ ಸಾಕಷ್ಟು ಸಮಸ್ಯೆ ಉಂಟಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.