ADVERTISEMENT

ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ವಿತರಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 14:49 IST
Last Updated 3 ಜನವರಿ 2024, 14:49 IST
ಅಯೋಧ್ಯೆ ಶ್ರೀರಾಮನ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಕುದೂರು ಪಟ್ಟಣದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು
ಅಯೋಧ್ಯೆ ಶ್ರೀರಾಮನ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಕುದೂರು ಪಟ್ಟಣದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು   

ಕುದೂರು: ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದ ಪವಿತ್ರ ಮಂತ್ರಾಕ್ಷತೆಯನ್ನು ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನ ಮಂಗಳವಾರದಿಂದ ಚಾಲನೆ ನೀಡಲಾಯಿತು.

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಮಾಡುವ ಕೋಟ್ಯಂತರ ಭಕ್ತರ ಶತಮಾನಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ ಎಂದು ಪಟ್ಟಣದ ರಾಮಲಿಂಗ ಚೌಡೇಶ್ವರಿ ದೇವಾಲಯದ ಅರ್ಚಕ ಶಿವರಾಮ್ ಹೇಳಿದರು.

ಪಟ್ಟಣದ ಪ್ರತಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಲು 10 ಸಾವಿರ ಪೊಟ್ಟಣಗಳನ್ನು ಇಲ್ಲಿನ ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರ ಸಹಕಾರದಿಂದ ಸಿದ್ಧಪಡಿಸಲಾಗಿದ್ದು ಮಂತ್ರಾಕ್ಷತೆಯೊಂದಿಗೆ ಶ್ರೀರಾಮ ಜನ್ಮಭೂಮಿಯ ವಿವರಣೆ ಮತ್ತು ಅದರ ಪರಿಚಯದ ಕರಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.