ADVERTISEMENT

ಸ್ವಾರ್ಥಕ್ಕಾಗಿ ಜೆಡಿಎಸ್‌ ರಾಜಕಾರಣ: ಇಕ್ಬಾಲ್ ಹುಸೇನ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 4:47 IST
Last Updated 29 ಅಕ್ಟೋಬರ್ 2024, 4:47 IST
<div class="paragraphs"><p>ಚನ್ನಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಸಿ.ಪಿ. ಯೋಗೇಶ್ವರ್ ಅವರ ಪರ ಮತಯಾಚನೆ ಮಾಡಿದರು</p></div>

ಚನ್ನಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಸಿ.ಪಿ. ಯೋಗೇಶ್ವರ್ ಅವರ ಪರ ಮತಯಾಚನೆ ಮಾಡಿದರು

   

ಚನ್ನಪಟ್ಟಣ: ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಚನ್ನಪಟ್ಟಣದ ಅಲ್ಪಸಂಖ್ಯಾತರ ವಿವಿಧ ವಾರ್ಡ್‌ಗಳಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಮುಖಂಡರೊಡಗೂಡಿ ಬಿರುಸಿನ ಮತ ಪ್ರಚಾರ ನಡೆಸಿದರು.

‘ಚನ್ನಪಟ್ಟಣವು ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಮುಸ್ಲಿಂ ಬಾಂಧವರು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ಇಲ್ಲಿನ ನಗರಸಭೆ ಸದಸ್ಯರು ಯುವಕರಾಗಿ ಉತ್ಸಾಹಿಗಳಾಗಿದ್ದು, ಕ್ಷೇತ್ರದ ಅಭಿವೃದ್ದಿ ಮಾಡಬೇಕೆಂಬ ಹಂಬಲ ಇದೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ’ ಎಂದು ಹೇಳಿದರು.

ADVERTISEMENT

‘ಜೆಡಿಎಸ್ ಪಕ್ಷದಿಂದ ಆಯ್ಕೆಯಾದವರು ಅಭಿವೃದ್ಧಿ ಬಗ್ಗೆ ಆಸಕ್ತಿ ವಹಿಸಲಿಲ್ಲ. ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಅವರು ಚುನಾವಣೆ ಮತ್ತು ಅಧಿಕಾರಕ್ಕೆ ಮಾತ್ರ ಸೀಮಿತರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಕ್ಷೇತ್ರದ ಅಭಿವೃದ್ಧಿ, ಬಡವರಿಗೆ ನಿವೇಶನ ಸೇರಿದಂತೆ ಮೂಲ ಸೌಕರ್ಯಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರನ್ನು ಆಯ್ಕೆ ಮಾಡಿಕೊಳ್ಳುವ ತೀರ್ಮಾನವನ್ನು ಕ್ಷೇತ್ರದ ಮತದಾರರು ಮಾಡಿದ್ದಾರೆ ಎಂದರು.

ವಕ್ಫ್ ಬೋರ್ಡ್ ಅಧ್ಯಕ್ಷ ಟಿಪ್ಪು, ನಗರಸಭೆ ಸದಸ್ಯರಾದ ತೌಸಿಫ್, ಅತೀಕ್ ಮುನಾವರ್, ಮತೀನ್ ಖಾನ್, ನಗರಸಭೆ ಮಾಜಿ ಸದಸ್ಯ ಅಕ್ಬರ್, ಮುಖಂಡರಾದ ನಿಜಾಂ ಮಹಮದ್ ಷರೀಪ್, ಖಾನ್, ವಸೀಂ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.