ರಾಮನಗರ: ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿರುವುದು ಚುನಾವಣಾ ಗಿಮಿಕ್ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಟೀಕಿಸಿದ್ದಾರೆ.
ಗುರುವಾರ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ವೀಕ್ಷಣೆ ಮತ್ತು ರಾಮನಗರ ಜಿಲ್ಲಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡ್ಡಗಾಲು ಹಾಕಿದ್ದ ಮತ್ತು ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲ್ಲ ಎಂದ ಕಾಂಗ್ರೆಸ್‌ನವರು ಈಗ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಕಟ್ಟುತ್ತೇವೆ ಎನ್ನುತ್ತಿರುವುದು ಆಶ್ಚರ್ಯ ತಂದಿದೆ ಎಂದರು.
‘ರಾಮ ಮಂದಿರವನ್ನು ಕಾಂಗ್ರೆಸ್‌ನವರು ನಿರ್ಮಿಸಬೇಕಿಲ್ಲ. ಬದಲಿಗೆ, ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನಾವೇ ಮಂದಿರ ಕಟ್ಟೋಣ ಎಂದು ಶಪಥ ಮಾಡೋಣ. ರಾಮನಗರವನ್ನು ಮತ್ತೊಂದು ಅಯೋಧ್ಯೆ ಮಾಡೋಣ’ ಎಂದರು.
ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ. ಬೆಟ್ಟದಲ್ಲಿ ಮಂದಿರ ನಿರ್ಮಾಣಕ್ಕೆ ಲಭ್ಯವಿರುವ ಜಾಗ ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಇತ್ತೀಚೆಗೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಸ್ಥಳೀಯ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.