ADVERTISEMENT

ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತನನ್ನು ಭೇಟಿಯಾದ ನಿಖಿಲ್: ಧೃತಿಗೆಡದಂತೆ ಮನವಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 12:18 IST
Last Updated 24 ನವೆಂಬರ್ 2024, 12:18 IST
<div class="paragraphs"><p>ಜೆಡಿಎಸ್ ಕಾರ್ಯಕರ್ತ  ಮಂಜುನಾಥ್ (ಅಭಿ) ಅವರ ನಿವಾಸಕ್ಕೆ  ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು</p></div>

ಜೆಡಿಎಸ್ ಕಾರ್ಯಕರ್ತ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು

   

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಚನ್ನಪಟ್ಟಣ ಉಪ ಚುನಾವಣೆಯ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಯುವಕನ ಕುಟುಂಬಕ್ಕೆ ಧೈರ್ಯ ಹೇಳಿದರು.

ಇನ್ನೆಂದೂ ಇಂತಹ ದುಡುಕಿನ ನಿರ್ಧಾರ ಮಾಡಬೇಡ ಎಂದು ಯುವಕನಿಗೆ ಕಿವಿಮಾತು ಹೇಳಿದರು. ಚುನಾವಣೆ ಎಂದ ಮೇಲೆ ಸೋಲು- ಗೆಲುವು ಸಾಮಾನ್ಯ. ಸೋಲೇ ಗೆಲುವಿನ ಮೆಟ್ಟಿಲು. ಹೀಗಾಗಿ ಯಾರೂ ಧೃತಿಗೆಡಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ADVERTISEMENT

ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ ಎಲ್ಲರೂ ಪಕ್ಷದ ಜತೆ ನಿಂತು ಕೆಲಸ ಮಾಡೋಣ, ಹೋರಾಟ ಮಾಡೋಣ. ನಾನು ಸೋತಿದ್ದೇನೆ ಎಂದು ಮನೆಯಲ್ಲಿ ಕುರುವುದಿಲ್ಲ, ಎದೆಗುಂದುವುದಿಲ್ಲ ನಿಮ್ಮ ಜತೆ ನಾನು ಇರ್ತೀನಿ, ಪಕ್ಷ ಇರುತ್ತೆ ಯಾರು ಕೂಡ ಧೃತಿಗೆಡಬಾರದು ಎಂದರು.

ಮನೆಗೆ ಆಧಾರವಾಗಿದ್ದ ಮಂಜುನಾಥ್ ಅವರು ಈ ರೀತಿ ಮಾಡಿಕೊಂಡಿದ್ದಕ್ಕೆ ಬಹಳ ಬೇಸರವಾಯಿತು.ಈ ತರ ಮಾಡಿಕೊಳ್ಳ ಬೇಡಿ ನಿಮ್ಮ ಜತೆ ನಾನಿರುತ್ತೇನೆ, ಎರಡು ಮಕ್ಳಳಿವೆ ಮನಸ್ಸು ಧೃತಿಗೆಡ ಬೇಡಿ ನಿಮ್ಮ ಜತೆ ಇರ್ತೇನೆ, ತಾಲ್ಲೂಕಿನಲ್ಲಿ ದೇವೇಗೌಡರು ಹಾಗೂ ಕುಮಾರಣ್ಣ ಮತ್ತು ಪಕ್ಷದ ಮೇಲೆ ಕಾರ್ಯಕರ್ತರು ಪ್ರಾಣ ಇಟ್ಟುಕೊಂಡಿದ್ದಾರೆ. ಯಾರು ಧೈರ್ಯ ಕಳೆದುಕೊಳ್ಳಬೇಡಿ ಎಂದು ನಿಖಿಲ್ ಅವರು ಮನವಿ ಮಾಡಿದರು.

ಇದೇ ವೇಳೆ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಜಯಮುತ್ತು, ಮುಖಂಡರಾದ ಕುಕ್ಕೂರ ದೊಡ್ಡಿ ಜಯರಾಮ್ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.