ADVERTISEMENT

ಉಪ ಚುನಾವಣೆ: ಬಹಿರಂಗ ಪ್ರಚಾರ ಇಂದು ಅಂತ್ಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 16:45 IST
Last Updated 10 ನವೆಂಬರ್ 2024, 16:45 IST

ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ 6 ಗಂಟೆಗೆ ತೆರೆ ಬೀಳಲಿದೆ. 

ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನ. 13ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ, ಮನೆಗೆ ತೆರಳಿ ಪ್ರಚಾರ ನಡೆಸಲು ಅವಕಾಶ ಇದೆ.

ಬಹಿರಂಗ ಪ್ರಚಾರದ ಕೊನೆಯ ದಿನವಾದ ಸೋಮವಾರ ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಚನ್ನಪಟ್ಟಣದಲ್ಲಿ ಬೆಳಿಗ್ಗೆ ಕಾಂಗ್ರೆಸ್ ಮತ್ತು ಮಧ್ಯಾಹ್ನ ಜೆಡಿಎಸ್‌ ಸಮಾವೇಶ ಹಮ್ಮಿಕೊಂಡಿವೆ.  

ADVERTISEMENT

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ನ.11ರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರ ಹೋಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಮೂರೂ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ನ.23ರಂದು ಹೊರಬೀಳಲಿದೆ. ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.