ADVERTISEMENT

ಬಿಡದಿ: ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 13:34 IST
Last Updated 1 ಅಕ್ಟೋಬರ್ 2024, 13:34 IST
ಪಾದಚಾರಿ ಮೇಲ್ಸೇತುವೆ ನಿರ್ಮಿಸಲು ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆ ಶಾಸಕ ಬಾಲಕೃಷ್ಣ ಸ್ಥಳ ಪರೀಶೀಲನೆ ನಡೆಸಿದರು
ಪಾದಚಾರಿ ಮೇಲ್ಸೇತುವೆ ನಿರ್ಮಿಸಲು ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆ ಶಾಸಕ ಬಾಲಕೃಷ್ಣ ಸ್ಥಳ ಪರೀಶೀಲನೆ ನಡೆಸಿದರು   

ಬಿಡದಿ: ಬೆಂಗಳೂರು-ಮೈಸೂರು ಹೆದ್ದಾರಿ ಮಂಚನಾಯಕನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಪಾದಾಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಸೋಮವಾರ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.

ಬಿಡದಿ ಹೋಬಳಿ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಎನ್ಎಚ್ಎಐ ಅಧಿಕಾರಿಗಳೊಂದಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಸೋಮವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪಾದಚಾರಿ ಮೇಲ್ಸೇತುವೆಯನ್ನು ಎನ್ಎಚ್ಎಐ ಸ್ವಾಧೀನಪಡಿಸಿಕೊಂಡಿರುವ ಸ್ಥಳದಲ್ಲಿ ಅಥವಾ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅರಣ್ಯ ಇಲಾಖೆಗೆ ಸೇರಿದ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಎಂದು ಸ್ಥಳೀಯ ಮುಖಂಡರು ಮನವಿ ಮಾಡಿದರು.

ಬೆಂಗಳೂರು ಮೈಸೂರು ಹೆದ್ದಾರಿಗೆ ಸ್ವಾಧೀನಪಡಿಸಿಕೊಂಡಿರುವ ಸ್ಥಳಗಳಲ್ಲಿ ಇನ್ನೂ ಕಟ್ಟಡಗಳಿದ್ದು, ಅವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು, ಬಿಡದಿ ಹೋಬಳಿ ವ್ಯಾಪ್ತಿಯ ಹೆಜ್ಜಾಲದಿಂದ ಕಲ್ಲುಗೋಪಳ್ಳಿವರೆಗೂ ಹೆದ್ದಾರಿ ನಿರ್ಮಾಣದ ಸಮಯದಲ್ಲಿ ತೆರವುಗೊಳಿಸಿರುವ ಬಸ್ ನಿಲ್ದಾಣಗಳನ್ನು ಹಾಗೂ ಚರಂಡಿಗಳನ್ನು ನಿರ್ಮಿಸಬೇಕು. ಶೇಷಗಿರಿಹಳ್ಳಿ ಬಳಿ ಅಂಡರ್‌ಪಾಸ್ ನಿರ್ಮಿಸಲು ಹೆಚ್ಚುವರಿ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ADVERTISEMENT

ಎನ್ಎಚ್ಎಐ ಅಧಿಕಾರಿ ನಿಷೀತ್, ದೈವಿಕ್, ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ ಗೋವಿಂದ, ಮಾಜಿ ಗ್ರಾ.ಪಂ ಅಧ್ಯಕ್ಷ ಸತೀಶ್, ಗಾಣಕಲ್ ನಟರಾಜ್, ನರಸಿಂಹಯ್ಯ, ರಂಗಸ್ವಾಮಿ, ಶಾಂತರಾಜು, ಸಂಪತ್, ರಮ್ಯಾ, ಧನಂಜಯ್, ಮಹೇಶ್, ಯೋಗಾನಂದ ಹಾಗೂ ಹಲವು ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.