ಕನಕಪುರ: ಮನೆಯಿಂದ ಹೊರ ಹೋಗಿದ್ದ ವ್ಯಕ್ತಿಯು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಸಾತನೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಣ್ಣ ಅವರ ಮಗ ಸತೀಶ್ (38) ಮೃತವ ವ್ಯಕ್ತಿ. ಅವರಿಗೆ ತಾಯಿ, ಪತ್ನಿ ಹಾಗೂ 2 ವರ್ಷದ ಮಗುವಿದೆ.
ಕಾರ್ಯನಿಮಿತ್ತ ಸತೀಶ್ ಅವರು ಶನಿವಾರ ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಕುಟುಂಬದವರು ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರುತ್ತಿರಲಿಲ್ಲ. ರಾತ್ರಿಯಿಡೀ ಹುಡುಕಿದ್ದರೂ ಸಿಕ್ಕಿರಲಿಲ್ಲ.
ಭಾನುವಾರ ಬೆಳಿಗ್ಗೆ ಸಾತನೂರು ಗ್ರಾಮ ಪಂಚಾಯಿತಿ ಮುಂಭಾಗದ ಕೆರೆಯ ಬಳಿ, ಸತೀಶ್ ಅವರ ಚಪ್ಪಲಿ ಇರುವುದನ್ನು ಗಮನಿಸಿದ ಸ್ಥಳೀಯರು, ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅನುಮಾನಗೊಂಡ ಕುಟುಂಬದವರು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಸತೀಶ್ ಅವರ ಶವ ದೊರೆತಿದೆ. ಅಂತ್ಯಕ್ರಿಯೆಯನ್ನು ಭಾನುವಾರ ಮಧ್ಯಾಹ್ನ ಗ್ರಾಮದಲ್ಲಿ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.