ಚನ್ನಪಟ್ಟಣ: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಈಚೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲು, ಕಣ್ಣು ತಪಾಸಣೆ ಹಾಗೂ ಮಾನಸಿಕ ಸದೃಢತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಯನ್ಸ್ ಸಂಸ್ಥೆ, ಬಾಲು ಪಬ್ಲಿಕ್ ಶಾಲೆ, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರೌಢಾವಸ್ಥೆಯಲ್ಲಿ ಮನಸ್ಸು ಚಂಚಲವಾಗಿರುತ್ತದೆ. ಮನಸ್ಸನ್ನು ನಿಗ್ರಹಿಸಿ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ನೀಡಬೇಕು. ಜೊತೆಗೆ ಮಾನಸಿಕ ಸದೃಢತೆ ಕಾಪಾಡಿಕೊಳ್ಳಬೇಕು ಎಂದು ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷ ವಿ.ವೆಂಕಟಸುಬ್ಬಯ್ಯ ಚಟ್ಟಿ ಕಿವಿಮಾತು ಹೇಳಿದರು.
ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ವಿ.ಸಿ.ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಸದಸ್ಯರಾದ ವಸಂತ್ ಕುಮಾರ್, ಗೋವಿಂದ ರಾಜು, ತಿಪ್ರೇಗೌಡ, ಪ್ರಾಂಶುಪಾಲ ಜಯಶಂಕರ್ ಮತ್ತು ಉಪನ್ಯಾಸಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.