ಕುದೂರು: ಸೋಲೂರು ಹೋಬಳಿ ಇತಿಹಾಸ ಪ್ರಸಿದ್ಧ ಕಂಚುಗಲ್ ಬಂಡೇಮಠದ ಮಹಾಲಿಂಗೇಶ್ವರ ರಥೋತ್ಸವ ಸೋಮವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ರಥೋತ್ಸವಕ್ಕೆ ಸಿದ್ದಗಂಗಾ ಮಠದ ಕಿರಿಯ ಶಿವಸಿದ್ದೇಶ್ವರ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ನಂತರ ದೇವಾಲಯ ಸುತ್ತ ಸಾಂಸ್ಕೃತಿಕ ಕಲಾ ತಂಡಗಳ ಭವ್ಯ ಮೆರವಣಿಗೆ ಮೂಲಕ ಮೂರು ಸುತ್ತು ರಥೋತ್ಸವ ಎಳೆಯಲಾಯಿತು.
ರಥೋತ್ಸವ ಪ್ರಯುಕ್ತ ಮಹಾ ರುದ್ರಾಭಿಷೇಕ, ಗಣಹೋಮ, ವಾಸ್ತು ಹೋಮ, ನವಗ್ರಹ ಹೋಮ, ಮಹಾ ಮೃತ್ಯುಂಜಯ ಹೋಮ, ಮಹಾರುದ್ರ ಹೋಮ, ಅಷ್ಟೋತ್ತರ, ಪೂರ್ಣಾಹುತಿ, ಆರೋಹಣ ಬಲಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಿತು.
ರಥೋತ್ಸವಕ್ಕೆ ಭಾಗವಹಿಸಿದ್ದ ಸಾವಿರಾರು ಮಂದಿ ಭಕ್ತರಿಗೆ ಸೋಮವಾರ ಬೆಳಗ್ಗೆಯಿಂದಲೇ ನಿರಂತರ ದಾಸೋಹ ನಡೆಯಿತು.
ಸಿದ್ದಗಂಗಾ ಮಠದ ಕಿರಿಯ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಕಂಚುಗಲ್ ಬಂಡೇಮಠ ಪೂರ್ವಕಾಲದಿಂದ ಇರುವ ಇತಿಹಾಸ ಹೊಂದಿರುವ ಮಠ. ಮಠ ಕೃಷಿಯನ್ನೇ ಅವಲಂಬಿಸಿದೆ. ಮಠದ ಶ್ರೀಗಳು ಉತ್ತಮ ಕಾರ್ಯಕ್ರಮ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಕಂಚುಗಲ್ ಬಂಡೇಮಠದ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಮಹಾಲಿಂಗೇಶ್ವರ ರಥೋತ್ಸವ ಪ್ರತಿವರ್ಷ ನಿರಂತರವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಭಾಗದ ರಥೋತ್ಸವ ತನ್ನದೆ ವೈಶಿಷ್ಟ್ಯತೆ ಪಡೆದುಕೊಂಡಿದೆ ಎಂದರು.
ಹೊನ್ನಮ್ಮ ಗವಿಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಗುರುವಣ್ಣ ದೇವರ ಮಠದ ನಂಜುಂಡ ಸ್ವಾಮೀಜಿ, ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ಅಂಕನಹಳ್ಳಿ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ, ದೊಡ್ಡಮಠದ ಶಿವಬಸವ ಸ್ವಾಮೀಜಿ, ಹಾಸನ ತಣ್ಣೀರುಹಳ್ಳಿ ಮಠದ ವಿಜಯ ಕುಮಾರ ಸ್ವಾಮೀಜಿ, ಬೇವೂರು ಮಠದ ಮೃತ್ಯುಂಜಯ ಸ್ವಾಮೀಜಿ, ಪವಾಡ ಬಸವಣ್ಣ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಕನ್ನಡ ಸಂಘಟನೆ ಪಾಲನೇತ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಗ್ರಾ.ಪಂ ಮಾಜಿ ಅಧ್ಯಕ್ಷ ಶರ್ಮ, ತಾ.ಪಂ ಮಾಜಿ ಸದಸ್ಯ ಶಂಕರಪ್ಪ, ಬಿಎಂಟಿಸಿ ಮಾಜಿ ನಿರ್ದೆಶಕ ಕೆ.ಪಿ.ಬೃಂಗೇಶ್, ಶರ್ಮ, ಗಂಗರಂಗಯ್ಯ, ಲಕ್ಕೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ನಾರಾಯಣ್, ನಾಗರಾಜು, ಕಾಂತರಾಜು, ರಮೇಶ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.