ADVERTISEMENT

ಉಪ ನೋಂದಣಾಧಿಕಾರಿ ಕಚೇರಿಗೆ ರಶ್ಮಿ ಮಹೇಶ್ ಭೇಟಿ

ಭೇಟಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2024, 4:34 IST
Last Updated 30 ಜನವರಿ 2024, 4:34 IST
ಚನ್ನಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿ.ಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಇತರರು ಹಾಜರಿದ್ದರು
ಚನ್ನಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿ.ಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಇತರರು ಹಾಜರಿದ್ದರು   

ಚನ್ನಪಟ್ಟಣ: ನಗರದ ಉಪ ನೋಂದಣಾಧಿಕಾರಿ ಕಚೇರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌‌‌‌

ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಕೆಲವರು ಮಧ್ಯವರ್ತಿಗಳ ಮೂಲಕ ಲಂಚ ಪಡೆಯುತ್ತಿದ್ದಾರೆ. ಹಣ ಇಲ್ಲದೆ ಕೆಲಸ ಆಗುತ್ತಿಲ್ಲ. ಕಚೇರಿ ಚಿಕ್ಕ ಜಾಗದಲ್ಲಿದ್ದು ಮೂಲ ಸೌಲಭ್ಯಗಳು ಇಲ್ಲ. ಪಾರ್ಕಿಂಗ್ ಸಮಸ್ಯೆ ಇರುವ ನಿಟ್ಟಿನಲ್ಲಿ ಕಚೇರಿ ಸ್ಥಳಾಂತರ ಮಾಡಬೇಕೆಂದು ‌‌‌ಸಾರ್ವಜನಿಕರ ದೂರು ಮತ್ತು ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳೊಂದಿಗೆ ರಶ್ಮಿ ಮಹೇಶ್ ಸಮಾಲೋಚನೆ ನಡೆಸಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಿದರು.

ಜ.23ರಂದು ಜಿಲ್ಲಾಧಿಕಾರಿ ಅವಿನಾಶ್ ರಾಜೇಂದ್ರ ಮೆನನ್ ಕೂಡ ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಮಹೇಂದ್ರ, ಉಪನೋಂದಣಾಧಿಕಾರಿ ರೇಣುಕಾ ಪ್ರಸಾದ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.