ಹಾರೋಹಳ್ಳಿ: ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಯಲು ನಿರಾಕರಿಸಿದ ಅಂದಿನ ದಿನಮಾನಗಳಲ್ಲಿ ಸಮಾಜಕ್ಕೆ ಎದುರಾಗಿ ಅನೇಕ ತರಹದ ನೋವು, ಆಪತ್ತು, ಅವಮಾನ ಮೆಟ್ಟಿ ನಿಂತು ಹೆಣ್ಣು ಮಕ್ಕಳಿಗಾಗಿಯೇ ಶಾಲೆ ತೆರೆದು ಅಕ್ಷರ ಉಣಬಡಿಸಿದ ಸಾವಿತ್ರಿ ಬಾಯಿ ಫುಲೆ ಅವರು ದೇಶದ ಮೊದಲ ಮಹಿಳಾ ಶಿಕ್ಷಕಿ ಎಂದು ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕೋಟೆ ಕುಮಾರ್ ಹೇಳಿದರು.
ಹಾರೋಹಳ್ಳಿಯಲ್ಲಿ ಸಾವಿತ್ರಿ ಬಾಯಿ ಫುಲೆ ಜಯಂತಿ ಅಂಗವಾಗಿ ಬುಧವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಶಿಕ್ಷಣ ಮತ್ತು ಸಮಾಜದ ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಸಮಾನ ಹಕ್ಕು ಪಡೆಯಲು ಸಾವಿತ್ರಿ ಬಾಯಿ ಫುಲೆ ಅವರೇ ಕಾರಣ. ಅವರ ಹೋರಾಟದ ಫಲಕ್ಕೆ ಮಹಿಳೆಯರು ಚಿರ ಋಣಿಯಾಗಿರಬೇಕು ಎಂದರು.
ಸಮಾಜದಲ್ಲಿ ತುಂಬಿದ್ದ ಮೌಢ್ಯ, ಕಂದಾಚಾರ, ಅಂಧಶ್ರದ್ಧೆ, ಶೋಷಣೆಯಂತಹ ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ್ದಾರೆ ಎಂದರು.
ಪ್ರಧಾನ ಕಾರ್ಯದರ್ಶಿ ಅಂಜನಮೂರ್ತಿ, ಕಾರ್ಯದರ್ಶಿ ಶಂಭುಲಿಂಗಯ್ಯ, ತಾಲ್ಲೂಕು ಅಧ್ಯಕ್ಷ ಕೋಟೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಧು, ಜಂಟಿ ಕಾರ್ಯದರ್ಶಿ ವೆಂಕಟೇಶ್, ರಾಮಲಿಂಗಯ್ಯ ಹಾಜರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.