ADVERTISEMENT

ಪಠ್ಯದಲ್ಲಿ ಕೆಂಪೇಗೌಡರ ಸಾಧನೆ ಸೇರಿಸಿ: ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:25 IST
Last Updated 7 ಜುಲೈ 2024, 16:25 IST
ನಂಜಾವಧೂತ ಸ್ವಾಮೀಜಿ
ನಂಜಾವಧೂತ ಸ್ವಾಮೀಜಿ   

ಮಾಗಡಿ: ‘ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬದುಕು ಹಾಗೂ ಸಾಧನೆಯನ್ನು ಮುಂದಿನ ತಲೆಮಾರಿಗೆ ತಿಳಿಸುವ ಕೆಲಸವಾಗಬೇಕಿದೆ. ಹಾಗಾಗಿ, ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ವಿಷಯ ಸೇರಿಸಬೇಕು’ ಎಂದು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ತಾಲ್ಲೂಕಿನ ತಾವರೆಕೆರೆಯಲ್ಲಿ ಭಾನುವಾರ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಕೆಂಪೇಗೌಡರು ಬೆಂಗಳೂರು ಮಹಾನಗರ ನಿರ್ಮಿಸುವ ಜೊತೆಗೆ ಕೆರೆ– ಕುಂಟೆ, ದೇವಸ್ಥಾನಗಳನ್ನು ನಿರ್ಮಿಸಿದರು. ಇಂತಹ ಮಹನೀಯರ ಸಾಧನೆಗಳನ್ನು ಬಿಂಬಿಸುವ ಪಾಠವನ್ನು ಪಠ್ಯಪುಸ್ತಕದಲ್ಲಿ ಸೇರಿಸುವ ಕೆಲಸ ಆಗಬೇಕಿದೆ’ ಎಂದರು.

‘ಸರ್ವ ಸಮುದಾಯಗಳನ್ನು ಸಮಾನವಾಗಿ ಕಂಡಿದ್ದ ಕೆಂಪೇಗೌಡರು, ಅವರ ದೈನದಿಂದ ಬದುಕಿನ ವ್ಯವಹಾರಗಳಿಗೆ ಪೂರಕವಾಗಿ ಅಕ್ಕಿಪೇಟೆ, ಚಿಕ್ಕಪೇಟೆ, ಕುಂಬಾರಪೇಟೆ, ಮಡಿವಾಳರ ಪೇಟೆ ಸೇರಿದಂತೆ ವಿವಿಧ ಪೇಟೆಗಳನ್ನು ನಿರ್ಮಿಸಿದರು. ಸರ್ವ ಜನಾಂಗಗಳ ಶಾಂತಿಯ ತೋಟವನ್ನು ಆಗಲೇ ಸಾಕಾರಗೊಳಿಸಿದ್ದರು’ ಎಂದು ಬಣ್ಣಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.