ಹಾರೋಹಳ್ಳಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಾಮಸಂದ್ರ ಗ್ರಾಮದಲ್ಲಿ ಶಿಥಿಲಾವಸ್ಥೆಗೆ ತಲುಪಿದ್ದ ಅಂಗನವಾಡಿಗೆ ಬುಧವಾರ ತಹಶೀಲ್ದಾರ್ ಶಿವಕುಮಾರ್ ಭೇಟಿ ನೀಡಿದರು.
ಅಂಗನವಾಡಿ ಕೇಂದ್ರದ ಪರಿಶೀಲನೆ ನಡೆಸಿ ಪುಟಾಣಿಗಳ ಶ್ರಯೋಭಿವೃದ್ಧಿಗಾಗಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಗ್ರಾಮದ ಪರಮೇಶ್ ಮಾತನಾಡಿ, ‘ಈ ಹಿಂದೆ ಗ್ರಾಮದಲ್ಲಿ 400ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿ ಅಂಗನವಾಡಿ ಕೇಂದ್ರ ಅಭಿವೃದ್ಧಿ ಇಲ್ಲ. ಪ್ರಾಥಮಿಕ ಶಾಲೆಗೆ ಆಟದ ಮೈದಾನವು ಇಲ್ಲ. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟವೂ ಇಲ್ಲದಂತಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.