ADVERTISEMENT

ಅಪಘಾತ: ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 5:18 IST
Last Updated 18 ಜೂನ್ 2024, 5:18 IST
ಸೋಲೂರು ಹೊರವಲಯದ ಎಂ.ಆರ್.ಆರ್ ಆಸ್ಪತ್ರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಜಖಂಗೊಂಡ ವಾಹನಗಳನ್ನು ಪೊಲೀಸರು ತೆರವುಗೊಳಿಸಿದರು
ಸೋಲೂರು ಹೊರವಲಯದ ಎಂ.ಆರ್.ಆರ್ ಆಸ್ಪತ್ರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಜಖಂಗೊಂಡ ವಾಹನಗಳನ್ನು ಪೊಲೀಸರು ತೆರವುಗೊಳಿಸಿದರು   

ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ಸೋಲೂರು ಹೊರವಲಯದ ಎಂ.ಆರ್.ಆರ್ ಆಸ್ಪತ್ರೆ ಸಮೀಪ ಭಾನುವಾರ ಮಧ್ಯಾಹ್ನ ಕಾರು ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಕುಣಿಗಲ್ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಆಟೋಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ ರಾಜೇಶ್, ಮಂಗಮ್ಮ ಮತ್ತು ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.