ರಾಮನಗರ: ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದ್ದು, ಇದರಿಂದಾಗಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಂಗನಬಸವನ ದೊಡ್ಡಿ ಅಂಡರ್‌ಪಾಸ್ ಬಳಿ ಸಂಚಾರ ದಟ್ಟಣೆ ಉಂಟಾಯಿತು.
ಅಂಡರ್‌ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಮತ್ತೆ ಅಲ್ಪ ಪ್ರಮಾಣದಲ್ಲಿ ನೀರು ನಿಂತಿದ್ದು, ನೀರನ್ನು ಹೊರ ಹಾಕುವ ಕಾರ್ಯ ನಡೆದಿತ್ತು. ಇದರಿಂದಾಗಿ ಬೈಕ್‌ಗಳು ಎಕ್ಸ್‌ಪ್ರೆಸ್ ವೇನಲ್ಲಿಯೇ ಸಂಚಾರ ಕೈಗೊಂಡವು. ಮಳೆ ಬಂದ ಸಂದರ್ಭ ಮೇಲ್ಸೆತುವೆ ಕೆಳಗೆ 50ಕ್ಕೂ ಹೆಚ್ಚು ಬೈಕ್ ಸವಾರರು ಆಶ್ರಯ ಪಡೆದರು. ಇದರಿಂದಾಗಿ ಹೆದ್ದಾರಿಯಲ್ಲಿ ಕಿ.ಮೀ. ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಡಿದರು.
ರಾಮನಗರ ಸಂಚಾರ ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಮಳೆ ನಿಂತ ಬಳಿಕ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.