ಹಾರೋಹಳ್ಳಿ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಟಯೋಟ ಕಿರ್ಲೋಸ್ಕರ್ ಆಟೊ ಪಾರ್ಟ್ಸ್ ಅವರ ಸಹಯೋಗದಲ್ಲಿ ಹಾರೋಹಳ್ಳಿ ತಾಲ್ಲೂಕಿನ ದೊಂಬರದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆಸ್ಪತ್ರೆ ಸಭಾಂಗಣದಲ್ಲಿ ಸಂಚಾರಿ ಕ್ಷ-ಕಿರಣ ಯಂತ್ರದಿಂದ ಫಲಾನುಭವಿಗಳಿಗೆ ಉಚಿತ ಪರೀಕ್ಷೆ ನಡೆಸಲಾಯಿತು.
ಈ ವೇಳೆ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಮಾತನಾಡಿ, ಕ್ಷಯರೋಗ ನಿರ್ಮೂಲನೆಗಾಗಿ ಪ್ರತಿ ಮಂಗಳವಾರ ಹಾಗೂ ಗುರುವಾರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕಿನಲ್ಲಿ ಸಂಚಾರಿ ಕ್ಷ-ಕಿರಣ ಯಂತ್ರ ಸಂಚರಿಸಲಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಅನ್ವಯ ಸಂಚಾರಿ ಕ್ಷ-ಕಿರಣ ಯಂತ್ರವನ್ನು ಕ್ಷಯರೋಗ ನಿರ್ಮೂಲನಾ ಘಟಕಕ್ಕೆ ಟಯೋಟ ಕಂಪನಿ ಒದಗಿಸಿದೆ. ರೋಗಿಗಳು ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.
ವೈದ್ಯಾಧಿಕಾರಿ ಡಾ. ಚರಿತಾ ಕುಲಕರ್ಣಿ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಫಲಾನುಭವಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.