ಕನಕಪುರ: ವಿಧಾನಸಭೆಯ ಚುನಾವಣೆ ರಂಗೇರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗಿದ್ದರೂ, ಕನಕಪುರದಲ್ಲಿ ಅದು ಉಲ್ಲಂಘನೆಯಾದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಂತಿದೆ.
ಕನಕಪುರ ವಿಧಾನಸಭಾ ಕ್ಷೇತ್ರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಸಾರ್ವಜನಿಕರಿಗಾಗಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದ ನಾಮಫಲಕದಲ್ಲಿ ಸಂಸದ ಡಿ.ಕೆ.ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳಿದ್ದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೂ, ಅದರ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವಚಿತ್ರ ಇರುವಂತಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರವು ನಾಮಫಲಕಗಳಲ್ಲಿ ಭಾವಚಿತ್ರ ತೆಗೆಯದಿರುವುದು ಚುನಾವಣಾ ಅಧಿಕಾರಿಗಳ ಕರ್ತವ್ಯ ಲೋಪವಾಗಿದೆ.
ಕನಕಪುರ ವಿಧಾನಸಭಾ ಕ್ಷೇತ್ರದ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಬೈರಪ್ಪ ಕನಕಪುರ ವಿಧಾನಸಭಾ ಕ್ಷೇತ್ರದ ನೀತಿ ಸಂಹಿತೆ ಜಾರಿಯಲ್ಲಿ ಲೋಪವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಗುವುದು. ಜೊತೆಗೆ ಭಾವಚಿತ್ರಗಳಿದ್ದರೆ, ಅವುಗಳನ್ನು ತೆಗೆಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.