ಚನ್ನಪಟ್ಟಣ: ವಿಶ್ವಕರ್ಮ ಸಮುದಾಯಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ಯೋಜನೆಗಳನ್ನು ನೀಡಿದ್ದು, ತಾಲ್ಲೂಕಿನ ವಿಶ್ವಕರ್ಮ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ಮನವಿ ಮಾಡಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ವಿಶ್ವಕರ್ಮ ಸಮುದಾಯಕ್ಕೆ ಪ್ರತಿಯೊಂದು ಕ್ಷೇತ್ರದಲ್ಲೂ ಶಕ್ತಿ ತುಂಬುತ್ತಿದೆ. ಸಮುದಾಯದ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಅರಿತು ಸಮುದಾಯವು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರನ್ನು ಬೆಂಬಲಿಸಬೇಕು ಎಂದರು.
ಕೆಪಿಸಿಸಿ ಹಿಂದುಳಿದ ಹಾಗೂ ಇತರೆ ವರ್ಗಗಳ ರಾಜ್ಯ ಉಪಾಧ್ಯಕ್ಷೆ ಪವಿತ್ರ ಪ್ರಭಾಕರರೆಡ್ಡಿ, ‘ಈ ಬಾರಿ ಎದುರಾಗಿರುವ ಉಪ ಚುನಾವಣೆಯಲ್ಲಿ ಕೆಳ ಸಮುದಾಯದವರಾದ ನಾವು ಶಕ್ತಿಯನ್ನು ಪ್ರದರ್ಶನ ಮಾಡಬೇಕಾದ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಉಪಚುನಾವಣೆಯಲ್ಲಿ ವಿಶ್ವಕರ್ಮ ಸಮುದಾಯ ನಿರ್ಣಾಯಕ ಪಾತ್ರ ವಹಿಸಬೇಕಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ರನ್ನು ಕೈ ಹಿಡಿಯುವ ಮೂಲಕ ಸರ್ಕಾರಕ್ಕೆ ಬಲ ನೀಡಬೇಕು’ ಎಂದರು.
ವಿಶ್ವಕರ್ಮ ಸಮುದಾಯದ ಸ್ಥಳೀಯ ಮುಖಂಡರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.