ADVERTISEMENT

ರಾಮನಗರ | ಅಂಗವಿಕಲರ ಬೈಕ್ ಜಾಥಾ

ಮತದಾನ ಪವಿತ್ರ ದಾನ, ನಿಮ್ಮ ಮತ ನಾಡಿಗೆ ಹಿತ ಮೊಳಗಿದ ಘೋಷಣೆಗಳು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2023, 7:01 IST
Last Updated 14 ಏಪ್ರಿಲ್ 2023, 7:01 IST
ಮತದಾನ ಜಾಗೃತಿಗಾಗಿ ಗುರುವಾರ ನಡೆದ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದ ಅಂಗವಿಕಲರು
ಮತದಾನ ಜಾಗೃತಿಗಾಗಿ ಗುರುವಾರ ನಡೆದ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದ ಅಂಗವಿಕಲರು   

ರಾಮನಗರ: ವಿಧಾನಸಭಾ ಚುನಾವಣಾ ಹಿನ್ನೆಲೆ ಗುರುವಾರ ಮತದಾರರ ಜಾಗೃತಿಗಾಗಿ ಅಂಗವಿಕಲರಿಂದ ಬೈಕ್‌ ಜಾಥಾ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಾಥದಲ್ಲಿ ಅಂಗವಿಕಲರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮತದಾನ ನನ್ನ ನಾಡು ನನ್ನ ದೇಶದ ಹೆಮ್ಮೆಯ ಪ್ರತೀಕ, ಮತದಾನ ಪ್ರಜಾಪ್ರಭುತ್ವದ ಪರಮ ಗುರಿ, ಮತದಾನ ಪವಿತ್ರ ದಾನ, ನಿಮ್ಮ ಮತ ನಾಡಿಗೆ ಹಿತ ಎಂಬ ಘೋಷಣೆಗಳೊಂದಿಗೆ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಿದರು.

ಜಾಥಾಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಚಾಲನೆ ನೀಡಿದರು. ಪ್ರತಿಯೊಬ್ಬ ಮತದಾರರು ಮೇ 10ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಅತ್ಯಂತ ಮಹತ್ವಪೂರ್ಣ ಕಾರ್ಯ. ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ಜರುಗಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರದೀಪ್, ಮತದಾನ ಜಾಗೃತಿ ರಾಯಭಾರಿ ಪ್ರಕಾಶ್ ಜಯರಾಮಯ್ಯ, ಕ್ರೀಡಾ ಇಲಾಖೆಯ ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗವೇಣಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.