ಕನಕಪುರ: ಮಹಿಳೆಯರ ಶಕ್ತಿಯಾಗಿರುವ ‘ಕನಕಾಂಬರಿ ಮಹಿಳಾ ಒಕ್ಕೂಟದ’ ಮಹಿಳಾ ಜಾಗೃತಿ ಮಹಾ ಸಮಾವೇಶ ನವೆಂಬರ್ 24ರಂದು ಭಾನುವಾರ ಇಲ್ಲಿನ ಆರ್‌ಇಎಸ್ ಮೈದಾನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷೆ ಗಂಗಮ್ಮ ತಿಳಿಸಿದರು.
ಇಲ್ಲಿನ ಕನಕ ಆಸ್ಪತ್ರೆ ರಸ್ತೆಯಲ್ಲಿರುವ ಕನಕಾಂಬರಿ ಮಹಿಳಾ ಒಕ್ಕೂಟದ ಕಚೇರಿಯಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಒಕ್ಕೂಟವು ತಾಲ್ಲೂಕಿನಲ್ಲಿ 7 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದೆ. ₹15ಕೋಟಿ ಸಾಲವನ್ನು ಬ್ಯಾಂಕ್‌ಗಳ ಮೂಲಕ ಸದಸ್ಯರಿಗೆ ನೀಡಲಾಗಿದೆ ಎಂದರು.
ಒಕ್ಕೂಟ ಮಹಿಳೆಯರ ಆರ್ಥಿಕ ಪ್ರಗತಿ ಜತೆಗೆ ಟೈಲರಿಂಗ್ ತರಬೇತಿ ನೀಡಿ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿದೆ. ಸದಸ್ಯರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಒಕ್ಕೂಟದ ಗೌರವ ಅಧ್ಯಕ್ಷ ಎಚ್.ಕೆ.ಶ್ರೀಕಂಠ, ಸಂಸ್ಥೆ ಪ್ರಗತಿ ಮತ್ತು ಬೆಳವಣಿಗೆಗೆ ಪೂರ್ಣ ಸಹಕಾರ ನೀಡುತ್ತಾ ಬಂದಿದ್ದಾರೆ. ಅವರ ಜನ್ಮದಿನ ಇದು 24 ಇರುವುದರಿಂದ ಅದರ ಅಂಗವಾಗಿ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕೆನರಾ ಬ್ಯಾಂಕ್ ವ್ಯವಸ್ಥಾಪಕ ಪರೇಶ್ ಪ್ರಭಾಕರ್ ನಾಯ್ಕ್, ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ್, ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ಕೆ.ಎನ್.ದಿಲೀಪ್, ಒಕ್ಕೂಟದ ನಿರ್ದೇಶಕರಾದ ಚಿಕ್ಕತಾಯಮ್ಮ, ಪ್ರೇಮ, ರೇಣುಕಮ್ಮ, ಚಂದ್ರಕಲಾ, ರತ್ನಮ್ಮ, ಪರಿಮಳ, ಕಾಂತಮ್ಮ, ಜಯಶೀಲ, ನಾಗರತ್ನಮ್ಮ, ರತ್ನಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.