ಕನಕಪುರ: ಇಲ್ಲಿನ ರೂರಲ್ ಪದವಿ ಕಾಲೇಜಿನ ಎಸ್.ಕರಿಯಪ್ಪ ಸ್ನಾತಕೋತರ ಪದವಿ ಅಧ್ಯಯನ ಕೇಂದ್ರದಲ್ಲಿ ಸೋಮವಾರ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು.
ಈ ವೇಳೆ ಉಪ ಪ್ರಾಂಶುಪಾಲ ದೇವರಾಜು ಮಾತನಾಡಿ, ಜನಸಂಖ್ಯಾ ಸ್ಫೋಟದಿಂದ ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಜನಸಂಖ್ಯೆ ನಿಯಂತ್ರಣವನ್ನು ನಾವು ಕಾಯ್ದುಕೊಳ್ಳಬೇಕಿದೆ ಎಂದರು.
ಜನಸಂಖ್ಯಾ ಸ್ಫೋಟದಿಂದ ಆಹಾರ ಸಮಸ್ಯೆ, ನಿರುದ್ಯೋಗ, ಬಡತನ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಎದುರಾಗಲಿದೆ. ಅದಕ್ಕಾಗಿ ಜನಸಂಖ್ಯೆ ನಿಯಂತ್ರಿಸಬೇಕು. ಜನಸಂಖ್ಯೆಗೆ ತಕ್ಕನಾಗಿ ಮೂಲ ಸೌಕರ್ಯ ಒದಗಿಸಬೇಕಿದೆ ಎಂದು ತಿಳಿಸಿದರು.
ಸಂಚಾಲಕ ಪ್ರೊ.ಪಾರ್ಥಸಾರಥಿ ಮಾತನಾಡಿ, ಇಂದಿನ ಯುವ ಪೀಳಿಗೆ ಸಮಾಜದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿ, ಕರ್ತವ್ಯ ಹಾಗೂ ಸಮಾಜಕ್ಕೆ ಬೇಕಾದ ಸಂಪನ್ಮೂಲಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ರಾಜು, ದೀಪಿಕಾ ಮಂಜುನಾಥ್, ಮೋಹನ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.