ADVERTISEMENT

ಅಕ್ರಮ ಸಿಎಲ್‌- 7 ಪರವಾನಗಿ ನೀಡಿದ ಅಧಿಕಾರಿಗಳ ತಲೆದಂಡ ಖಚಿತ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 14:02 IST
Last Updated 26 ಆಗಸ್ಟ್ 2023, 14:02 IST
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳ ಸಭೆ ನಡೆಸಿದರು
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳ ಸಭೆ ನಡೆಸಿದರು    

ತೀರ್ಥಹಳ್ಳಿ: ‘ರಾಷ್ಟ್ರೀಯ ಹೆದ್ದಾರಿ 169 ಮಾರ್ಗದ ಬದಲಿಗೆ ಸ್ಥಳೀಯ ರಸ್ತೆ ಎಂದು ಸುಳ್ಳು ದಾಖಲೆ ಸೃಷ್ಟಿಸಲಾಗಿದೆ. ದಾಖಲೆ ಆಧಾರದಲ್ಲಿ ಸಿಎಲ್‌- 7 (ಹೋಟೆಲ್‌ ಮತ್ತು ವಸತಿಗೃಹ) ಮದ್ಯ ಮಾರಾಟ ಅಂಗಡಿಗೆ ಅನುಮತಿ ನೀಡಿದ ಅಧಿಕಾರಿಗಳ ತಲೆದಂಡ ಖಚಿತ’ ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಗುರುವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಸಭೆಯಲ್ಲಿ ಅಬಕಾರಿ ಇಲಾಖೆ ಕಾರ್ಯ ನಿರ್ವಹಣೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘2000ರಲ್ಲಿ ಶಿವಮೊಗ್ಗ– ಕೊಪ್ಪವೃತ್ತ– ಶೃಂಗೇರಿ ಮಾರ್ಗದ ರಸ್ತೆ, 2013ರಲ್ಲಿ ಕೊಪ್ಪವೃತ್ತ– ಆಗುಂಬೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ರಸ್ತೆಯಾಗಿ ಪರಿವರ್ತನೆ ಆಗಿದೆ. ಸಿಎಲ್‌–7 ಮದ್ಯ ಮಾರಾಟ ಮಳಿಗೆಗೆ ಅನುಮತಿ ನೀಡುವ ಉದ್ದೇಶದಿಂದ ಮಳಿಗೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ರಸ್ತೆಯಲ್ಲಿ ಇಲ್ಲ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ದಾಖಲೆ ನೀಡಿದ್ದು ಪ್ರಶ್ನಾರ್ಹವಾಗಿದೆ. ಇದಕ್ಕೆ ಅಧಿಕಾರಿಗಳು ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಗುಡುಗಿದರು.

ADVERTISEMENT

‘ಸಾರ್ವಜನಿಕ ಉಪಯೋಗದ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ವಸತಿ ಸಮುಚ್ಚಯ ಕಟ್ಟಡ ನಿರ್ಮಾಣ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕೆ ತರಬೇಕು. ಗೂಡಂಗಡಿ ಸ್ಥಳದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲಾ ಶೆಟ್ಟಿ, ಉಪಾಧ್ಯಕ್ಷ ರೆಹಮತ್‌ ಉಲ್ಲಾ ಅಸಾದಿ, ಮುಖ್ಯಧಿಕಾರಿ ಕುರಿಯಕೋಸ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.