ADVERTISEMENT

ವಿಚಾರಣಾಧೀನ ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2019, 16:58 IST
Last Updated 16 ಮೇ 2019, 16:58 IST

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಭದ್ರಾವತಿ ಇರ್ಫಾನ್ (30) ಮೃತಪಟ್ಟವರು. ಸಾಗರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದ ಇರ್ಫಾನ್ ಗುರುವಾರ ಬೆಳಗಿನ ಜಾವ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಆರಂಭಕ್ಕೂ ಮೊದಲೇ ಕೊನೆಯುಸಿರೆಳೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT