ADVERTISEMENT

ಕಡಿಮೆಯಾದ ಮಳೆ, ಆಗುಂಬೆ ಘಾಟಿ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 16:22 IST
Last Updated 8 ಜುಲೈ 2021, 16:22 IST
ಆಗುಂಬೆ ಘಾಟಿ ರಸ್ತೆಯ ಸಾಂದರ್ಭಿಕ ಚಿತ್ರ
ಆಗುಂಬೆ ಘಾಟಿ ರಸ್ತೆಯ ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಇರುವ ಕಾರಣ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅ.15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು. ಈಗ ಮಳೆ ಪ್ರಮಾಣ ಕಡಿಮೆ ಇದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಳೆ ಹೆಚ್ಚಾದರೆ ಮತ್ತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.