ADVERTISEMENT

ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಗ್ರಾ.ಪಂ ಅಧ್ಯಕ್ಷನ ಮನೆಯ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 4:08 IST
Last Updated 19 ಜುಲೈ 2024, 4:08 IST
<div class="paragraphs"><p>ಶಿವಮೊಗ್ಗದ ಕೃಷಿ ನಗರದ ಪ್ರಕಾಶ್ ನಿವಾಸ</p></div>

ಶಿವಮೊಗ್ಗದ ಕೃಷಿ ನಗರದ ಪ್ರಕಾಶ್ ನಿವಾಸ

   

ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ ಇಲ್ಲಿನ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪ್ರಕಾಶ್ ಹಾಗೂ ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಶುಕ್ರವಾರ ಮುಂಜಾನೆ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕೃಷಿ ನಗರದಲ್ಲಿರುವ ಪ್ರಕಾಶ್ ನಿವಾಸ ಹಾಗೂ ಅಂತರ ಗಂಗೆಯಲ್ಲಿರುವ ನಾಗೇಶ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ADVERTISEMENT

ನಾಗೇಶ್ ಭದ್ರಾವತಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡ ಆಗಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ ಆಪ್ತ ಬಳಗದಲ್ಲಿದ್ದಾರೆ. ಈ ಹಿಂದೆ ಭದ್ರಾವತಿ ತಾಲ್ಲೂಕಿನ ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.