ಭದ್ರಾವತಿ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಿಶಾ ಸಮಿತಿಗೆ ನಗರದ ಯುವ ಮುಖಂಡ ಜಿ.ಆನಂದಕುಮಾರ್ ನಾಮ ನಿರ್ದೇಶನಗೊಂಡಿದ್ದಾರೆ.
ಸಮಿತಿ ಅಧ್ಯಕ್ಷ, ಸಂಸದ ಬಿ.ವೈ ರಾಘವೇಂದ್ರ ಅವರ ಶಿಫಾರಸು ಆಧರಿಸಿ ಆನಂದಕುಮಾರ್ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಿಶಾ ಸಮಿತಿ ಅಧ್ಯಕ್ಷ ಹಾಗೂ 40 ಮಂದಿ ಸದಸ್ಯರನ್ನು ಒಳಗೊಂಡಿದೆ. ಆನಂದಕುಮಾರ್ ಅವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಮೂಲಕ ಗುರುತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.