ADVERTISEMENT

ಶಿವಮೊಗ್ಗದ ರೈಲು ಬೆಳಿಗ್ಗೆ 5ಕ್ಕೆ ಬೆಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:55 IST
Last Updated 15 ಫೆಬ್ರುವರಿ 2021, 21:55 IST

ಶಿವಮೊಗ್ಗ: ‘ಶಿವಮೊಗ್ಗದಿಂದ ರಾತ್ರಿ ಹೊರಟು ಬೆಳಿಗ್ಗೆ 3.45ಕ್ಕೆ ಬೆಂಗಳೂರು ತಲುಪುತ್ತಿದ್ದ ರೈಲು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5ಕ್ಕೆ ತಲುಪಲಿದೆ. ಪ್ರತಿದಿನ ಬೆಳಿಗ್ಗೆ 5.30ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ಯಶವಂತಪುರ ತಲುಪುತ್ತಿತ್ತು. ಈಗ ಮೆಜೆಸ್ಟಿಕ್‍ಗೆ ತಲುಪಲಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ ನೀಡಿದರು.

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ಮಾರ್ಗದ ₹ 116.31 ಕೋಟಿ ವೆಚ್ಚದ ಮೂರು ಮೇಲು ಸೇತುವೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

‘ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಚೆನ್ನೈ, ತಿರುಪತಿ ರೈಲು ಸಂಚಾರ ಪುನರಾರಂಭಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರ ಆರಂಭಗೊಳ್ಳುವ ನಿರೀಕ್ಷೆ ಇದೆ. ಅಲ್ಲದೇ ಡಿಆರ್‌ಡಿಒ ಕೇಂದ್ರವನ್ನು ಶಿವಮೊಗ್ಗದಲ್ಲಿ ಆರಂಭಿಸುವಂತೆ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.₹ 160 ಕೋಟಿ ವೆಚ್ಚದಲ್ಲಿ ಜೋಗ ಅಭಿವೃದ್ಧಿ ಪಡಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.