ADVERTISEMENT

ವಿಶ್ವಕ್ಕೆ ಯೋಗದ ಮಹತ್ವ ಪರಿಚಯಿಸಿದ್ದು ಭಾರತ: ಸಂಸದ ಬಿ.ವೈ. ರಾಘವೇಂದ್ರ

-

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 14:20 IST
Last Updated 24 ನವೆಂಬರ್ 2024, 14:20 IST
ಶಿವಮೊಗ್ಗದ ವಿನೋಬನಗರದಲ್ಲಿ ಮಹಾನಗರ ಪಾಲಿಕೆಯಿಂದ ನಿರ್ಮಿಸಿರುವ ಯೋಗ ಭವನದ ಹೋಮದ ಕಾರ್ಯಕ್ರಮದಲ್ಲಿ ಭಾನುವಾರ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ.ಧನಂಜಯ ಸರ್ಜಿ ಪಾಲ್ಗೊಂಡಿದ್ದರು
ಶಿವಮೊಗ್ಗದ ವಿನೋಬನಗರದಲ್ಲಿ ಮಹಾನಗರ ಪಾಲಿಕೆಯಿಂದ ನಿರ್ಮಿಸಿರುವ ಯೋಗ ಭವನದ ಹೋಮದ ಕಾರ್ಯಕ್ರಮದಲ್ಲಿ ಭಾನುವಾರ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ.ಧನಂಜಯ ಸರ್ಜಿ ಪಾಲ್ಗೊಂಡಿದ್ದರು   

ಶಿವಮೊಗ್ಗ: ‘ವಿಶ್ವಕ್ಕೆ ಯೋಗ ಮತ್ತು ಅದರ ಮಹತ್ವ ಪರಿಚಯಿಸಿದ ದೇಶ ಭಾರತ ಎಂಬ ಹೆಮ್ಮೆ ನಮ್ಮದು’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಉದ್ಯಮನಿಧಿ ಯೋಜನೆಯಡಿಯಲ್ಲಿ ₹ 3 ಕೋಟಿ ವೆಚ್ಚದಲ್ಲಿ ಇಲ್ಲಿನ ವಿನೋಬನಗರದಲ್ಲಿ ನೂತನವಾಗಿ ನಿರ್ಮಿಸಲಾದ ವಾಣಿಜ್ಯ ಸಂಕೀರ್ಣ ಹಾಗೂ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಅಜಿತ ಯೋಗಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶ್ವದ ಸುಮಾರು 150 ದೇಶಗಳಲ್ಲಿ ಯೋಗವನ್ನು ಅಭ್ಯಸಿಸುತ್ತಿರುವುದು ಹೆಮ್ಮೆ ಎನಿಸಿದೆ. ಇದರಿಂದಾಗಿ ಜಾಗತಿಕವಾಗಿ ಭಾರತವನ್ನು ವಿಶ್ವಗುರುವಾಗಿ ಗುರುತಿಸಲಾಗುತ್ತಿದೆ. ಯೋಗ ವಿಶ್ವಮಾನ್ಯವಾಗಿದೆ’ ಎಂದರು.

ADVERTISEMENT

‘ಉತ್ತಮ ಸಂಸ್ಕೃತಿ, ಸಂಸ್ಕಾರಗಳಿರುವಲ್ಲಿ ಈ ರೀತಿಯ ಸದ್ವಿಚಾರಗಳು ಆಚರಣೆ ಬಂದು, ಸರ್ವರ ಹಿತದ ಕಾರ್ಯ ನಡೆಯುತ್ತವೆ. ಶಾಸಕ ಚನ್ನಬಸಪ್ಪ ಅವರ ಸಮಾಜಮುಖಿ ಚಿಂತನೆಯ ಫಲದಿಂದಾಗಿ ಯೋಗ ಕೇಂದ್ರ ಆರಂಭಗೊಂಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ್, ಯೋಗ ಶಿಕ್ಷಕರಾದ ಶ್ರೀನಿವಾಸಮೂರ್ತಿ, ಅರವಿಂದ್, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ, ಬಿಜೆಪಿ ಮುಖಂಡ ಎಸ್. ದತ್ತಾತ್ರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.