ADVERTISEMENT

ಬಿ.ವೈ. ವಿಜಯೇಂದ್ರಗೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಘಟಕದಿಂದ ಅದ್ಧೂರಿ ಸ್ವಾಗತ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 6:25 IST
Last Updated 29 ನವೆಂಬರ್ 2023, 6:25 IST
<div class="paragraphs"><p>ಶಿವಮೊಗ್ಗ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ಜಿಲ್ಲಾ ಘಟಕದಿಂದ ಅದ್ಧೂರಿ ಸ್ವಾಗತ</p></div>

ಶಿವಮೊಗ್ಗ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ಜಿಲ್ಲಾ ಘಟಕದಿಂದ ಅದ್ಧೂರಿ ಸ್ವಾಗತ

   

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ ಬಂದ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಶಿವಮೊಗ್ಗದ ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ವಾದ್ಯ ಮೇಳದೊಂದಿಗೆ ವಿಜಯೇಂದ್ರ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ADVERTISEMENT

ಬಿ.ವೈ.ವಿಜಯೇಂದ್ರ ಬಿಜೆಪಿ ಕಚೇರಿಗೆ ಬಂದಾಗ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ಭಾರತ ಮಾತಾಕಿ ಜೈ ಘೋಷಣೆ ಮಾಡಿದರು.

ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆ ನಮ್ಮ ಎದುರಿನ ಸವಾಲಾಗಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕಿದೆ. ಇದಕ್ಕೆ ಪಕ್ಷದ ಎಲ್ಲ ನಾಯಕರು ಕೈ ಜೋಡಿಸಬೇಕಿದೆ ಎಂದರು.

ನಂತರ ಬಿ.ವೈ.ವಿಜಯೇಂದ್ರ ಅವರನ್ನು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಿಇಎಸ್ ಕಾಲೇಜು ಸಭಾಂಗಣಕ್ಕೆ ಕರೆದೊಯ್ಯಲಿದ್ದು, ಅಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.