ಶಿವಮೊಗ್ಗ: ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಭಾನುವಾರ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕ್ರಿಸ್‌ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯಿತು.
ಶನಿವಾರ ಮಧ್ಯರಾತ್ರಿ ಹಾಗೂ ಮುಂಜಾನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮೀಯರು ಪಾಲ್ಗೊಂಡಿದ್ದರು. ಚರ್ಚ್‌ಗಳಲ್ಲಿ ಕೇಕ್, ಚಾಕೊಲೆಟ್, ಸಿಹಿ ತಿಂಡಿ ಹಂಚಲಾಯಿತು.
ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ ಹಬ್ಬದೂಟ ಮಾಡಲಾಯಿತು. ಚರ್ಚ್‌ಗಳಲ್ಲಿ ಶುಭಾಶಯ ಗೀತೆಗಳು, ಕ್ರಿಸ್ತರ ಸ್ತುತಿಯ ಗೀತೆಗಳು ಸಾಮೂಹಿಕವಾಗಿ ಕೇಳಿಬಂದವು. ಚರ್ಚ್‌ನಲ್ಲಿ ಫಾದರ್ ಸ್ಟ್ಯಾನಿ ಡಿಸೋಜಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರಾರ್ಥನೆ ನಡೆಯಿತು. ಕ್ರಿಸ್ತರ ಜನನದ ಶುಭ ಗಳಿಗೆಯ ಸ್ಮರಣೆಗೆ ಬೆಳಕಿನ ಸಂಕೇತವಾಗಿ ಮೇಣದ ಬತ್ತಿ ಬೆಳಗಿಸಲಾಯಿತು. ಪುಟ್ಟ ಮಕ್ಕಳು ಸಾಂತಾಕ್ಲಾಸ್ ಸೇರಿ ತರಹೇವಾರಿ ವೇಷ ಧರಿಸಿ ಗಮನ ಸೆಳೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.