ADVERTISEMENT

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 8:02 IST
Last Updated 18 ಏಪ್ರಿಲ್ 2024, 8:02 IST
<div class="paragraphs"><p>ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ಪಾಲ್ಗೊಂಡಿದ್ದಾರೆ.</p></div>

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ಪಾಲ್ಗೊಂಡಿದ್ದಾರೆ.

   

ಶಿವಮೊಗ್ಗ: 'ಅಭಿವೃದ್ಧಿ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಎದುರಾಳಿಗಳ ಅಪಪ್ರಚಾರಕ್ಕೆ ಕಿವಿಗೊಡುವುದಿಲ್ಲ' ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ನಗರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಹೀಗಾಗಿ ಆ ಪಕ್ಷದ ಕಾರ್ಯಕರ್ತರ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ’ ಎಂದರು.

ADVERTISEMENT

‘ವಿರೋಧಿಗಳ ಅಪಪ್ರಚಾರವೇ ನನಗೆ ಆಶೀರ್ವಾದ ಎಂದು ಭಾವಿಸುತ್ತೇನೆ. ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಅಪಾರ ಪ್ರಮಾಣದಲ್ಲಿ ಜನಸ್ತೋಮ ಭಾಗವಹಿಸಿದೆ. ಜನರ ಉತ್ಸಾಹ ನೋಡಿದರೆ ನೂರಕ್ಕೆ ನೂರು ಶಿವಮೊಗ್ಗ ಕ್ಷೇತ್ರವನ್ನು ನರೇಂದ್ರ ಮೋದಿ ಅವರಿಗೆ ಅರ್ಪಣೆ ಮಾಡಲಿದ್ದಾರೆ’ ಎಂದರು.

‘ಜನರು ಸ್ವಂತ ಹಣ ಖರ್ಚು ಮಾಡಿಕೊಂಡು ಮೆರವಣಿಗೆಗೆ ಬಂದಿದ್ದಾರೆ. ಈ ಬಾರಿ ಕಳೆದ ಚುನಾವಣೆಗಿಂತ ಹೆಚ್ಚು ಮತಗಳು ಬರಲಿದೆ. ಎದುರಾಳಿಗಳ ಬಗ್ಗೆ ಚಿಂತೆಯಿಲ್ಲ’ ಎಂದರು.

ಜೆಡಿಎಸ್ ಶಾಸಕಿ ಶಾರದಾ ಪೂರ್ಯ ನಾಯ್ಕ ಮಾತನಾಡಿ, ‘ಹೈಕಮಾಂಡ್ ಅಣತಿಯಂತೆ ಕೆಲಸ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಗೆಲುವಿಗೆ ಶ್ರಮಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.