ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 4 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 15:53 IST
Last Updated 8 ನವೆಂಬರ್ 2024, 15:53 IST

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ₹ 51,000 ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮೋಹನ್‌ ಜೆ.ಎಸ್‌. ಅವರು ಗುರುವಾರ ಆದೇಶ ನೀಡಿದ್ದಾರೆ. 

ದಂಡ ಕಟ್ಟಲು ವಿಫಲವಾದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪರಿಹಾರ ರೂಪವಾಗಿ ದಂಡ ಮೊತ್ತದಲ್ಲಿ ₹ 50,000 ಮತ್ತು ಸರ್ಕಾರದಿಂದ ₹ 2 ಲಕ್ಷ ಹಣವನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರು ಆದೇಶಿಸಿದ್ದಾರೆ. 

2023ರಲ್ಲಿ ಭದ್ರಾವತಿ ತಾಲ್ಲೂಕಿನ 43 ವರ್ಷದ ವ್ಯಕ್ತಿಯು 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ  ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಸಿಪಿಐ ಶಾಂತಿನಾಥ್ ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ADVERTISEMENT

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಶ್ರೀಧರ್‌ ಎಚ್‌.ಆರ್‌. ವಾದ ಮಂಡಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.