ADVERTISEMENT

2ಎ ಮೀಸಲಾತಿಗೆ ಒತ್ತಾಯಿಸಿ ಧರಣಿ

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 8 ಮೇ 2022, 3:15 IST
Last Updated 8 ಮೇ 2022, 3:15 IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಹಾಗೂ ಎಲ್ಲಾ ಲಿಂಗಾಯತರಿಗೆ ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಶಿಕಾರಿಪುರ ತಾಲ್ಲೂಕು ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಮನವಿ ಸಲ್ಲಿಸಿದರು.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಹಾಗೂ ಎಲ್ಲಾ ಲಿಂಗಾಯತರಿಗೆ ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಶಿಕಾರಿಪುರ ತಾಲ್ಲೂಕು ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಮನವಿ ಸಲ್ಲಿಸಿದರು.   

ಶಿಕಾರಿಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಹಾಗೂ ಎಲ್ಲಾ ಲಿಂಗಾಯತರಿಗೆ ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಶನಿವಾರ ತಾಲ್ಲೂಕು ಕಚೇರಿ ಮುಂಭಾಗ ತಾಲ್ಲೂಕು ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಪ್ರತಿಭಟನಾ ಧರಣಿ ನಡೆಸಿದರು.

ಪಂಚಮಸಾಲಿ ಸಮಾಜದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗ ಪಡೆಯಲು 2ಎ ಮೀಸಲಾತಿ ಅಗತ್ಯ. ಸಮಾಜದ ಬಡಮಕ್ಕಳಿಗೆ ಈ ಮೀಸಲಾತಿ ಸೌಲಭ್ಯ ಅನುಕೂಲವಾಗಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮ ದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದ ಸಂದರ್ಭ ರಾಜ್ಯ ಸರ್ಕಾರ 2ಎ ಮೀಸಲಾತಿ ನೀಡುವ ಭರವಸೆ ನೀಡಿತ್ತು. ಆದರೆ, ಈ ಭರವಸೆ ಈಡೇರಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮಹಂತೇಶ್, ತಾಲ್ಲೂಕು ಅಧ್ಯಕ್ಷ ಮಹಾರುದ್ರಪ್ಪ, ಮಲ್ಲಿಕಾರ್ಜುನ್, ಗಂಗಾಧರ್ ಶೆಟ್ರು, ನಾಗರಾಜ್, ಬಸವರಾಜ್ ಪಾಟೀಲ್, ಮಮತಾ, ಲತಾ, ರಾಜಮ್ಮ, ಸುಮ, ಸಿದ್ದನಗೌಡ್ರು, ಹನುಮನಗೌಡ, ನಾಗಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.