ADVERTISEMENT

ಶಿಕಾರಿಪುರ | ನಟ ದರ್ಶನ್, ತಂಡದ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 14:42 IST
Last Updated 18 ಜೂನ್ 2024, 14:42 IST
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಅವರ ತಂಡದ ಸದಸ್ಯರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿಕಾರಿಪುರ ತಾಲ್ಲೂಕು ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಅವರ ತಂಡದ ಸದಸ್ಯರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿಕಾರಿಪುರ ತಾಲ್ಲೂಕು ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ಶಿಕಾರಿಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಅವರ ತಂಡದ ಸದಸ್ಯರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಲ್ಲೇಶಪ್ಪ ಬೀರಪ್ಪ ಪೂಜಾರ್ ಅವರಿಗೆ ಮನವಿ ಸಲ್ಲಿಸಿದರು.

ನಟ ದರ್ಶನ್ ಹಾಗೂ ತಂಡದ ಸದಸ್ಯರು ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ ನಟರು ನಿಜ ಜೀವನದಲ್ಲಿ ಇಂತಹ ದುಷ್ಕೃತ್ಯ ನಡೆಸಿರುವುದು ದುರಂತ. ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿತ್ತು. ಆದರೆ, ಕಾನೂನನ್ನು ಕೈಗೆತ್ತಿಕೊಂಡಿದ್ದು ಅಕ್ಷಮ್ಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ರಾಜ್ಯ ಸರ್ಕಾರ ರೇಣುಕಸ್ಚಾಮಿ ಕೊಲೆ ಆರೋಪಿಗಳ ರಕ್ಷಣೆಗೆ ಮುಂದಾಗಬಾರದು. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕದೇ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಬೇಕು. ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ತಂಡಕ್ಕೆ ಗಲ್ಲು ಶಿಕ್ಷೆ ನೀಡಬೇಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನಾ ಸಭೆಗೂ ಮುನ್ನ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಕಾರರು, ಬಳಿಕ ತಾಲ್ಲೂಕು ಕಚೇರಿ ತನಕ ಮೆರವಣಿಗೆ ನಡೆಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮುಖಂಡ ಎನ್.ವಿ. ಈರೇಶ್, ಮಹಿಳಾ ಘಟಕದ ಅಧ್ಯಕ್ಷೆ ಕಾಂಚನಾ ಕುಮಾರ್, ಜಂಗಮ ಸಮಾಜದ ಜಿಲ್ಲಾ ನಿರ್ದೆಶಕ ಐ.ಎಂ.ಐ. ಶಿವಾನಂದಸ್ವಾಮಿ, ಕುಮಾರಸ್ವಾಮಿ ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟಸ್ವಾಮಿ, ಅಖಿಲ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಶಿಧರ್ ಸ್ವಾಮಿ, ಪದಾಧಿಕಾರಿಗಳಾದ ಕೆ.ಜಿ. ವಸಂತಗೌಡ್ರು, ಅಶ್ವಿನ್ ಕಡ್ಡಿಪುಡಿ, ಜ್ಯೋತಿ ಹರಿಹರ ಸಿದ್ದಲಿಂಗೇಶ್, ಹೇಮಾವತಿ ಹಿರೇಮಠ, ಕೆ.ಜಿ.ಶಿವಪ್ಪಯ್ಯ, ಸಾಲೂರು ಪ್ರಭುಸ್ವಾಮಿ, ಜಗದೀಶ್ ಈಸೂರು, ಕಲ್ಮನೆ ಭೋಜರಾಜ ಪಾಟೀಲ್, ಶಿವಯ್ಯ, ದಲಿತ ಸಂಘರ್ಷ ಸಮಿತಿ ಸಂಚಾಲಕ ಚುರ್ಚಿಗುಂಡಿ ಜಗದೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.