ADVERTISEMENT

’ಗ್ಯಾರಂಟಿ‘ ಪ್ರಾಧಿಕಾರ: ಜಿಲ್ಲೆಗೆ ಚಂದ್ರಭೂಪಾಲ ಅಧ್ಯಕ್ಷ

-

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:54 IST
Last Updated 14 ಮಾರ್ಚ್ 2024, 15:54 IST
ಸಿ.ಎಸ್. ಚಂದ್ರಭೂಪಾಲ
ಸಿ.ಎಸ್. ಚಂದ್ರಭೂಪಾಲ   

ಶಿವಮೊಗ್ಗ:  ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ  ಪ್ರಧಾನ ಕಾರ್ಯದರ್ಶಿ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಿ.ಎಸ್.ಚಂದ್ರಭೂಪಾಲ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಯಲ್ಲಿ  ಸಕ್ರಿಯವಾಗಿ ಕಾರ್ಯನಿಸುತ್ತಿದ್ದಾರೆ. ಕೆಪಿಸಿಸಿ ರಾಜ್ಯ ಸಂಯೋಜಕರಾಗಿ ಮತ್ತು ಅಹಿಂದ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ  ಸಾರ್ವಜನಿಕರ  ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಜಾರಿಗೊಂಡಿದ್ದು ಈ ಐದು ಗ್ಯಾರಂಟಿ  ಯೋಜನೆಯ  ಲಾಭವು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಈ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸರ್ಕಾರ ರಚನೆ ಮಾಡಿದೆ. ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ  ಶಿವಮೊಗ್ಗ  ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.