ADVERTISEMENT

ಜೋಗದ ಅಭಿವೃದ್ಧಿಗೆ ಅನುದಾನ ಮಂಜೂರು: ಗೋಪಾಲಕೃಷ್ಣ ಬೇಳೂರು

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 16:10 IST
Last Updated 25 ಜೂನ್ 2024, 16:10 IST
<div class="paragraphs"><p>ಗೋಪಾಲಕೃಷ್ಣ ಬೇಳೂರು</p></div>

ಗೋಪಾಲಕೃಷ್ಣ ಬೇಳೂರು

   

ಸಾಗರ: ತಾಲ್ಲೂಕಿನ ಜೋಗ ಜಲಪಾತದ ಅಭಿವೃದ್ಧಿ ಕಾಮಗಾರಿಗೆ ಸಂಸದ ಬಿ.ವೈ.ರಾಘವೇಂದ್ರ ಅಥವಾ ಮಾಜಿ ಶಾಸಕ ಹರತಾಳು ಹಾಲಪ್ಪ ಅವರಿಂದ ಯಾವುದೇ ಅನುದಾನ ಮಂಜೂರಾಗಿಲ್ಲ. ನಾನು ಶಾಸಕನಾದ ನಂತರವಷ್ಟೇ ₹ 95 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದರು.

ಜೋಗದ ಅಭಿವೃದ್ಧಿ ಕಾಮಗಾರಿಗೆ ಅಗತ್ಯವಿರುವ ಹಣವನ್ನು ಗುತ್ತಿಗೆದಾರರಿಗೆ ನೀಡಿರಲಿಲ್ಲ. ಈಗ ಅದು ಬಿಡುಗಡೆಯಾಗುವಂತೆ ಮಾಡಲಾಗಿದೆ ಎಂದು ಅವರು ಇಲ್ಲಿನ ನಗರಸಭೆ ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ  ಅವರು ಮಾತನಾಡಿದರು.

ADVERTISEMENT

‘ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ನಿಜವಲ್ಲ. ಇಲ್ಲಿನ ಮೀನು ಮಾರುಕಟ್ಟೆ ಕಟ್ಟಡಕ್ಕೆ ₹ 1.20 ಕೋಟಿ, ಮಿನಿ ವಿಧಾನಸೌಧ ಕಟ್ಟಡಕ್ಕೆ ₹ 4.80 ಕೋಟಿ, ಸರ್ಕಾರಿ ಆಸ್ಪತ್ರೆಗೆ ₹ 1.70 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ. ಕ್ಷೇತ್ರಕ್ಕೆ ನಾನು ಯಾವುದೇ ಅನುದಾನ ತಂದಿಲ್ಲ ಎಂದು ಸುಳ್ಳು ಪ್ರಚಾರ ಮಾಡುವುದು ಇನ್ನಾದರೂ ನಿಲ್ಲಬೇಕು’ ಎಂದರು.

ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕು ಎಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿದ್ದೇನೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.