ADVERTISEMENT

ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಚಾಟನೆಗೆ ತೀರ್ಮಾನ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 11:35 IST
Last Updated 29 ಏಪ್ರಿಲ್ 2024, 11:35 IST
Relief from the party to the victims: HD Kumaraswamy
Relief from the party to the victims: HD Kumaraswamy   

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ ಎಂದು ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಆ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಪ್ರಜ್ವಲ್‌ ಅವರ ಉಚ್ಚಾಟನೆಯ ಬಗ್ಗೆ ಭಾನುವಾರ ರಾತ್ರಿಯೇ ದೇವೇಗೌಡರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದರು.

ADVERTISEMENT

ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನೂ ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ದರೆ ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು ಎಂಬ ನನ್ನ ನಿಲುವು ಮುಂದುವರೆಯಲಿದೆ ಎಂದು ಹೇಳಿದರು.

ಈ ವಿಚಾರದಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್‌ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನರೇಂದ್ರ ಮೋದಿ, ಬಿಜೆಪಿ, ದೇವೇಗೌಡರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಈ ವಿಚಾರದಲ್ಲಿ ನನ್ನ ಹಾಗೂ ನನ್ನ ತಂದೆಯ ಬಗ್ಗೆ ಯಾರೂ ಸಂಶಯಪಡಬೇಡಿ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.