ADVERTISEMENT

ಹೆಚ್ಚಿದ ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 15:57 IST
Last Updated 15 ಜುಲೈ 2024, 15:57 IST
<div class="paragraphs"><p>ತುಮರಿ ಹೊಳೆಬಾಗಿಲು ಸಮೀಪು ಸೋಮವಾರ ಸುರಿದ ಮಳೆ</p></div>

ತುಮರಿ ಹೊಳೆಬಾಗಿಲು ಸಮೀಪು ಸೋಮವಾರ ಸುರಿದ ಮಳೆ

   

ಶಿವಮೊಗ್ಗ: ಸತತ ಮಳೆ ಬೀಳುತ್ತಿರುವುದು ಹಾಗೂ ಮಂಗಳವಾರ ಕೂಡ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೋಮವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಸರಾಸರಿ 3.94 ಸೆಂ.ಮೀ ಮಳೆ ಆಗಿದೆ. ಸಾಗರ ತಾಲ್ಲೂಕಿನಲ್ಲಿ ಅತಿಹೆಚ್ಚು ಸರಾಸರಿ 7.19 ಸೆಂ.ಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಹೊಸನಗರ ತಾಲ್ಲೂಕಿನ ಚಕ್ರಾದಲ್ಲಿ 14 ಸೆಂ.ಮೀ ಅತಿಹೆಚ್ಚು ಮಳೆ ಬಿದ್ದಿದೆ. ಉಳಿದಂತೆ ಮಾಸ್ತಿಕಟ್ಟೆ 13.5, ಹುಲಿಕಲ್ 13.2, ಸಾವೇಹಕ್ಲು 12.5 ಹಾಗೂ ಮಾಣಿ 10.2 ಸೆಂ.ಮೀ ಮಳೆ ಸುರಿದಿದೆ.

ADVERTISEMENT

ಮಳೆಯ ಆರ್ಭಟಕ್ಕೆ ತುಂಗಾ, ಭದ್ರೆ, ವರದಾ, ಕುಮದ್ವತಿ, ಶರಾವತಿ ಮೈದುಂಬಿವೆ. ಗಾಜನೂರಿನ ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ 21 ಕ್ರಸ್ಟ್‌ ಗೇಟ್ ಗಳನ್ನೂ ತೆರೆಯಲಾಗಿದೆ. ಜಲಾಶಯಕ್ಕೆ 33 ಸಾವಿರ ಕ್ಯುಸೆಕ್ ಒಳಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಶಿವಮೊಗ್ಗದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.